ಬೆಂಗಳೂರು: ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ 6 ಎಕರೆ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ರಾಜ್ಯ ಸರ್ಕಾರವು ಬಲವಂತದ ಕ್ರಮವಿಲ್ಲ ಎನ್ನುವಂತ ಮುಚ್ಚಳಿಕೆಯನ್ನು ಹಿಂಪಡೆದಿದೆ.
ಈ ಸಂಬಂಧ ಇಂದು ನ್ಯಾಯಾಲಯಕ್ಕೆ ಎಎಜಿ ಕಿರಣ್ ಮಾಹಿತಿ ನೀಡಿದ್ದು, ಕಾಯ್ದೆ ತಿದ್ದುಪಡಿಯ ಸಂವಿಧಾನ ಬದ್ಧತೆ ಪ್ರಶ್ನಿಸೋದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹೀಗಾಗಿ ಬಲವಂತದ ಕ್ರಮವಿಲ್ಲ ಎಂಬುದಾಗಿ ಸರ್ಕಾರ ಸಲ್ಲಿಸಿದ್ದಂತ ಮುಚ್ಚಳಿಕೆಯನ್ನು ಹಿಂಪಡೆಯುವುದಾಗಿ ಹೇಳಿದರು.
ಅಂದಹಾಗೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ 6 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿದ್ದನ್ನು ಕಂದಾಯ ಇಲಾಖೆಯಿಂದ ಸರ್ವೆ ಮಾಡಿ ತೆರವುಗೊಳಿಸಿ, ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಸರ್ಕಾರ ಬಲವಂತದ ಕ್ರಮವಿಲ್ಲ ಎಂಬುದಾಗಿ ನ್ಯಾಯಾಲಯಕ್ಕೆ ಮುಚ್ಚಳಿಕೆ ಸಲ್ಲಿಸಿತ್ತು.
BREAKING: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ‘ಶಿಕ್ಷಕರ ನಿಯೋಜನೆ’ ರದ್ದು: ರಾಜ್ಯ ಸರ್ಕಾರ ಆದೇಶ
BIG NEWS: ರಾಜ್ಯದಲ್ಲಿ ಮಾರಾಟವಾಗುತ್ತಿರುವ ‘ಔಷಧಿಗಳ ಗುಣಮಟ್ಟ’ದ ಬಗ್ಗೆ ‘ಆರೋಗ್ಯ ಇಲಾಖೆ’ ಶಾಕಿಂಗ್ ಮಾಹಿತಿ ಬಿಡುಗಡೆ