ಬೆಂಗಳೂರು : ಸಾರ್ವಜನಿಕರು ಕುಡಿಯುವ ನೀರಿನ ಬಾಟಲ್ಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸಬೇಕು. ಹೊರಗಡೆ ದೊರೆಯುವ ನೀರಿನ ಬಾಟಲಿಗಳಲ್ಲಿ ಹಲವು ಅಸುರಕ್ಷಿತವಾಗಿರುವುದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ. ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.