ಕಲಬುರ್ಗಿ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸಾಲು ಸಾಲು ಸರಣಿ ದರೋಡೆ ಪ್ರಕರಣಗಳು ನಡೆದಿವೆ. ಮಂಗಳೂರು, ಬೀದರ್ ಬ್ಯಾಂಕಿನ ಹಣ ದರೋಡೆ ಬೆನ್ನಲ್ಲೇ ಇದೀಗ ಖದೀಮರು ಕಲಬುರಗಿಯಲ್ಲಿ ಎಸ್‌ಬಿಐ ಎಂಟಿಎಂಗೆ ಕನ್ನ ಹಾಕಿದ್ದಾರೆ. ಗ್ಯಾಸ್ ಕಟರ್ ಬಳಸಿ ಕಳ್ಳರು ATM ನಿಂದ 18 ಲಕ್ಷ ರೂ. ಕದ್ದೊಯ್ದಿರುವ ಘಟನೆ ಕಲಬುಗರಿಯ ಪೂಜಾರಿ ಚೌಕ್‌ನಲ್ಲಿ ನಡೆದಿದೆ.
ಹೌದು ಇತ್ತೀಚೆಗೆ ಬೀದರ್ನಲ್ಲಿ ಇಬ್ಬರಿಗೆ ಶೂಟ್ ಮಾಡಿ ಎಟಿಎಂ ಹಣ ದೋಚಿಕೊಂಡು ಹೋಗಿದ್ದರು. ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಬ್ಯಾಂಕ್ ದರೋಡೆಯಾಗಿತ್ತು. ಇದೀಗ ಕಲಬುರಗಿಯಲ್ಲಿ ಮತ್ತೊಂದು ಎಟಿಎಂ ದರೋಡೆಯಾಗಿದೆ. ಕಲಬುರಗಿಯಲ್ಲಿ ಏಪ್ರಿಲ್ 9ರ ನಸುಕಿನ ಜಾವ 3 ಗಂಟೆ ಸುಮಾರಿಗೆ ಹರಿಯಾಣದ ಮೂಲದ ಗ್ಯಾಂಗ್ ಎಟಿಎಂಗೆ ನುಗ್ಗಿದೆ.
ತಡರಾತ್ರಿ 2.18ಕ್ಕೆ ಕಾರೊಂದು ಪಾಸ್ ಆಗಿದೆ. ಅದಾಗಿ 48 ನಿಮಿಷದಲ್ಲೇ ಎಂಟಿಎಂ ಕಳ್ಳತನವಾಗಿದೆ. ಹೀಗಾಗಿ ಇದೇ ಕಾರಿನಲ್ಲಿ ಖದೀಮರು ಬಂದಿರುವ ಶಂಕೆ ವ್ಯಕ್ತವಾಗಿದೆ. ಎಟಿಎಂನಲ್ಲಿ ಸೆಕ್ಯೂರಿಟಿ ಗಾರ್ಡ್ ಇಲ್ಲದ್ದನ್ನ ಗಮನಿಸಿ ಎಟಿಎಂಗೆ ನುಗ್ಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಗುರುತು ಸಿಗಬಾರದು ಎಂದು ಕಿರಾತಕರು ಮೊದಲಿಗೆ ಸಿಸಿಕ್ಯಾಮರಾಗೆ ಬ್ಲ್ಯಾಕ್ ಸ್ಪ್ರೇ ಮಾಡಿ ಬಳಿಕ ಎಟಿಎಂ ಲಾಕರ್ ಕಟ್ ಮಾಡಿ ಬರೋಬ್ಬರಿ 18 ಲಕ್ಷ ರೂ. ಹಣ ದೋಚಿಕೊಂಡು ಪರಾರಿಯಾಗಿದ್ದಾರೆ. ಪೊಲೀಸರು ಕಾರಿನ ನಂಬರ್ ಟ್ರೇಸ್ ಮಾಡುತ್ತಿದ್ದಾರೆ.