ಬೆಂಗಳೂರು: ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಅವರ ಕಾಡುಗೊಲ್ಲ ಬುಡಕಟ್ಟು ಕುಲಕಥನಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕೊಡ ಮಾಡುವಂತ ಪುಸ್ತಕ ಸೊಗಸು ಬಹುಮಾನ ಸಂದಿದೆ.
ಇಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದಂತ ಡಾ.ಮಾನಸ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2022, 2023 ಮತ್ತು 2024ನೇ ಸಾಲಿನ ಕನ್ನಡ ಪುಸ್ತಕ ಸೊಗಡು ಹಾಗೂ ಮುದ್ರಣ ಸೊಗಡು ಬಹುಮಾನಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿತತು. ನಿನ್ನೆ ಈ ಸಂಬಂಧ ಉಪ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಮೂರು ವರ್ಷಗಳ ಬಹುಮಾನಗಳಿಗಾಗಿ ಅರ್ಹ ಪುಸ್ತಕಗಳನ್ನು ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.
2023ನೇ ಸಾಲಿನ ಕನ್ನಡ ಪುಸ್ತ ಪ್ರಾಧಿಕಾರದಿಂದ ಕೊಡ ಮಾಡುವಂತ ಪುಸ್ತಕ ಸೊಗಡು ಎರಡನೇ ಬಹುಮಾನವನ್ನು ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಅವರ ಕಾಡುಗೊಲ್ಲ ಬುಡಕಟ್ಟು ಕುಲಕಥನ ಪುಸ್ತಕವನ್ನು ಆಯ್ಕೆ ಮಾಡಲಾಗಿದೆ. ಶಿವಮೊಗ್ಗದ ಗೀತಾಂಜಲಿ ಪುಸ್ತಕ ಪ್ರಕಾಶನದ ಪುಸ್ತಕಕಕ್ಕೆ 2023ನೇ ಸಾಲಿನ ಪುಸ್ತಕ ಸೊಗಡು ಎರಡನೇ ಬಹುಮಾನಕ್ಕೆ ಆಯ್ಕೆ ಮಾಡಲಾಗಿದ್ದು, ರೂ.20,000 ಬಹುಮಾನ ಒಳಗೊಂಡಿರುತ್ತದೆ ಅಂತ ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
ಕನ್ನಡ ಪುಸ್ತಕ ಪ್ರಾಧಿಕಾರದಿಂದ ಕನ್ನಡ ಪುಸ್ತಕ ಸೊಗಸು, ಮುದ್ರಣ ಸೊಗಸು ಬಹುಮಾನ ಪ್ರಕಟ
ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ತಪ್ಪದೇ ಇದನ್ನೊಮ್ಮೆ ಓದಿ.!