ಚಿಕ್ಕಮಗಳೂರು : ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಘೋಷಿಸಿದೆ. ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟದಿಂದ ಅವಾಂತರ ಸೃಷ್ಟಿಯಾಗಿದ್ದು, . ಭಾರಿ ಮಳೆಯಿಂದ KSRTC ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಹೌದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ಘಟನೆ ನಡೆದಿದೆ. ಕೆಎಸ್ಆರ್ಟಿಸಿ ಬಸ್ ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ತಕ್ಷಣ ಗಾಯಾಳುಗಳನ್ನು ಕೊಪ್ಪ ಮತ್ತು ಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.