ಬೆಂಗಳೂರು : ಸಾರ್ವಜನಿಕರು ಕುಡಿಯುವ ನೀರಿನ ಬಾಟಲಿಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸಬೇಕು. ಹೊರಗಡೆ ದೊರೆಯುವ ನೀರಿನ ಬಾಟಲಿಗಳಲ್ಲಿ ಹಲವು ಅಸುರಕ್ಷಿತವಾಗಿರುವುದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ನಡೆಸಿದ ವಿಶ್ಲೇಷಣೆಯಲ್ಲಿ ತಿಳಿದುಬಂದಿದೆ.
ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ. ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್‌ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇಲಾಖೆಯು ಒಟ್ಟು 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಳಿಸಿದೆ. ಇದರಲ್ಲಿ 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ಲೀಗಲ್ ಸ್ಯಾಂಪಲ್‌ಗಳ ಪರೀಕ್ಷೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.