ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಿಡಿದೆದ್ದಿದೆ. ಏಪ್ರಿಲ್.17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಈ ತಿಂಗಳ 17 ರಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾವು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ. ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಬೆಲೆಗಳನ್ನು ಹೆಚ್ಚಿಸಲು ಕಾರಣವಾದ ಸರ್ಕಾರದ ವಿರುದ್ಧ ಜನ ಆಕ್ರೋಶ್ ಇದೆ ಎಂದರು.
ನಾನು ಕೇವಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಮಾತನಾಡುತ್ತಿಲ್ಲ. ಅವರು (ಕರ್ನಾಟಕ ಬಿಜೆಪಿ) ತಮ್ಮ ಜನ ಆಕ್ರೋಶ ಯಾತ್ರೆಯನ್ನು ಪ್ರಾರಂಭಿಸಿದ ದಿನ, ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಉಡುಗೊರೆಯಾಗಿ ಹೆಚ್ಚಿಸಿತು. ಅವರು ಎಲ್ಲದರ ಬೆಲೆಯನ್ನು ಹೆಚ್ಚಿಸಿದ್ದಾರೆ ಎಂದರು.
ಬೆಂಗಳೂರಲ್ಲಿ 2ನೇ ಏರ್ ಪೋರ್ಟ್: 3 ಸ್ಥಳಗಳ ಪರಿಶೀಲನೆ ನಡೆಸಿದ AAI ತಂಡ, ಒಂದು ತಿಂಗಳಲ್ಲಿ ಸ್ಥಳ ಫೈನಲ್