Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

VTUನಿಂದ UG, PG ಪರೀಕ್ಷೆಯ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | VTU Result 2026

03/03/2026 5:44 PM

ವಾಹನ ಸವಾರರಿಗೆ ನೆಮ್ಮದಿಯ ಸುದ್ದಿ: ಭಾರತದಲ್ಲಿ ಸದ್ಯಕ್ಕೆ ಏರಿಕೆಯಾಗಲ್ಲ ಪೆಟ್ರೋಲ್-ಡೀಸೆಲ್ ದರ! ಏಕೆ ಗೊತ್ತೇ?

03/03/2026 5:39 PM

ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

03/03/2026 5:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಪ್ರತೀ ವರ್ಷ ‘ರಾಷ್ಟ್ರೀಯ ಭೂಮಾಪನ ದಿನಾಚರಣೆ’ : CM ಸಿದ್ದರಾಮಯ್ಯ ಘೋಷಣೆ.!
KARNATAKA

BIG NEWS : ರಾಜ್ಯದಲ್ಲಿ ಪ್ರತೀ ವರ್ಷ ‘ರಾಷ್ಟ್ರೀಯ ಭೂಮಾಪನ ದಿನಾಚರಣೆ’ : CM ಸಿದ್ದರಾಮಯ್ಯ ಘೋಷಣೆ.!

By kannadanewsnow5711/04/2025 5:41 AM

ಬೆಂಗಳೂರು : ಪ್ರತೀ ವರ್ಷ ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಆಚರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿಧಾನಸೌಧದ ಮುಂಭಾಗ ಆಯೋಜಿಸಿದ್ದ ರಾಷ್ಟ್ರೀಯ ಭೂಮಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ಇದ್ದಂತೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ. ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ. ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ. ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದರು.

ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಮತ್ತೂ ಕೊಡುತ್ತೇನೆ. ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ. ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಮಾಡಿರುವ ರೀತಿಯಲ್ಲೇ ಕೃಷ್ಣಬೈರೇಗೌಡರು ಸರ್ವೇಯರ್ ಗಳ ನೇಮಕಾತಿ ಮಾಡಿದ್ದಾರೆ. ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್ ಆರ್ ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು.

ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ.

BIG NEWS: 'National Survey Day' to be celebrated every year in the state: CM Siddaramaiah's announcement!
Share. Facebook Twitter LinkedIn WhatsApp Email

Related Posts

VTUನಿಂದ UG, PG ಪರೀಕ್ಷೆಯ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | VTU Result 2026

03/03/2026 5:44 PM1 Min Read

ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

03/03/2026 5:31 PM1 Min Read

ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು

03/03/2026 5:22 PM1 Min Read
Recent News

VTUನಿಂದ UG, PG ಪರೀಕ್ಷೆಯ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | VTU Result 2026

03/03/2026 5:44 PM

ವಾಹನ ಸವಾರರಿಗೆ ನೆಮ್ಮದಿಯ ಸುದ್ದಿ: ಭಾರತದಲ್ಲಿ ಸದ್ಯಕ್ಕೆ ಏರಿಕೆಯಾಗಲ್ಲ ಪೆಟ್ರೋಲ್-ಡೀಸೆಲ್ ದರ! ಏಕೆ ಗೊತ್ತೇ?

03/03/2026 5:39 PM

ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

03/03/2026 5:31 PM

BREAKING : ಇರಾನ್ ಸಂಘರ್ಷದ ನಡುವೆ ‘ಒಮಾನ್ ಸುಲ್ತಾನ್, ಕುವೈತ್ ಕ್ರೌನ್ ಪ್ರಿನ್ಸ್’ ಜೊತೆ ‘ಪ್ರಧಾನಿ ಮೋದಿ’ ಮಾತುಕತೆ, ಕಳವಳ ವ್ಯಕ್ತ

03/03/2026 5:25 PM
State News
KARNATAKA

VTUನಿಂದ UG, PG ಪರೀಕ್ಷೆಯ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | VTU Result 2026

By kannadanewsnow0903/03/2026 5:44 PM KARNATAKA 1 Min Read

ಬೆಳಗಾವಿ: ಕರ್ನಾಟಕದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (Visvesvaraya Technological University (VTU)) 2025ರ ಡಿಸೆಂಬರ್ ಮತ್ತು 2026ರ ಜನವರಿ ತಿಂಗಳಿನಲ್ಲಿ…

ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

03/03/2026 5:31 PM

ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು

03/03/2026 5:22 PM

ಮಾ.6ರಂದು ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ: 2026-27ನೇ ಸಾಲಿನ ಬಜೆಟ್ ಅನುಮೋದನೆಗೆ ಸಜ್ಜಾದ ಸರ್ಕಾರ

03/03/2026 5:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.