ಪಾಟ್ನಾ : ಬಿಹಾರದ ಹಲವು ಜಿಲ್ಲೆಗಳಲ್ಲಿ ಗುರುವಾರ ಸಿಡಿಲು ಬಡಿದು ಕನಿಷ್ಠ 82 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಕಚೇರಿ (ಸಿಎಂಒ) ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ನಳಂದ ಸಿವಾನ್ನಲ್ಲಿ ಇಬ್ಬರು, ಕಟಿಹಾರ್, ದರ್ಭಂಗಾ, ಬೇಗುಸರಾಯ್, ಭಾಗಲ್ಪುರ್ ಮತ್ತು ಜೆಹಾನಾಬಾದ್ನಲ್ಲಿ 82 ಜನರು ಸಾವನ್ನಪ್ಪಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಬುಧವಾರ, ಬಿಹಾರದ ನಾಲ್ಕು ಜಿಲ್ಲೆಗಳಲ್ಲಿ ಸಿಡಿಲು ಬಡಿದು 13 ಜನರು ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಿಡಿಲು ಮತ್ತು ಆಲಿಕಲ್ಲು ಮಳೆಯಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಮತ್ತು ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.