ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಕಬ್ಬಿಣದ ರಾಡ್ ನಿಂದ ಹೊಡೆದು ಹೆತ್ತ ತಾಯಿಯನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬಾಗಲಕುಂಟೆಯ ಮುನೇಶ್ವರ ನಗರದಲ್ಲಿ ತಡರಾತ್ರಿ ಹೆತ್ತ ತಾಯಿಯನ್ನು ಕೊಲೆ ಮಾಡಿದ್ದಾನೆ. ಮೃತ ಮಹಿಳೆಯನ್ನು ಶಾಂತಬಾಯಿ (82) ಎಂದು ಗುರುತಿಸಲಾಗಿದೆ. ಮಗ ಮಹೇಂದ್ರ ಸಿಂಗ್ ಕೊಲೆ ಮಾಡಿರುವ ಮಗನಾಗಿದ್ದು, ಕುಡಿತದ ದಾಸನಾಗಿದ್ದ ಮಹೇಂದ್ರ ಸಿಂಗ್ ಕುಡಿದ ಮತ್ತಿನಲ್ಲಿ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಬಾಗಲಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.