ಬೆಂ ಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಸಚಿವ ಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ರಾಜ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನ ಸಂಚಿಬ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಮಂಡನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆಯಾಗಿದೆ. ಅಲ್ಲದೆ ಗುರುವಾರ ಅಂದರೆ ಏಪ್ರಿಲ್ 17 ರಂದು ಸಂಜೆ 4 ಗಂಟೆಗೆ ವಿಶೇಷ ಸಂಪುಟ ಸಭೆ ಕರೆಯಲಾಗಿದೆ. ಸಂಪುಟ ಸಭೆಯಲ್ಲಿ ಜಾತಿ ಗಣ ಜನಗಣತಿ ವರದಿ ಕುರಿತು ಚರ್ಚಿಸುತ್ತೇವೆ. ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.