ಕೊಪ್ಪಳ : ಅತಿಯಾಗಿ ಕಿರುಕುಳದಿಂದ ಬೇಸತ್ತ ಪತ್ನಿ ಒಬ್ಬಳು ತನ್ನ 5 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಆದರೆ ಅದೃಷ್ಟವಶಾತ್ ಈ ಒಂದು ಘಟನೆಯಲ್ಲಿ ತಾಯಿ ಸಾವನ್ನಪ್ಪಿದ್ದು 5 ವರ್ಷದ ಮಗಳು ಪ್ರಾಣಾಪಾಯದಿಂದ ಬಚಾವ್ ಆಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ನಡೆದಿದೆ.
ಬೆಂಕಿ ಹಚ್ಚಿಕೊಂಡ ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದು, 5 ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದೆ.ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಮಂಗಲ ಎಂದು ತಿಳಿದುಬಂದಿದೆ.ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪುತ್ರಿ ಸಮಾನ್ವಿತಾ ಸ್ಥಿತಿ ಗಂಭೀರವಾಗಿದೆ.ತಕ್ಷಣ ಮಗುವನ್ನು ಬಳ್ಳಾರಿ ಆಸ್ಪತ್ರೆಗೆ ಸ್ಥಳೀಯರು ರವಾನಿಸಿದ್ದಾರೆ. ಮೃತ ಮಹಿಳೆಗೆ ಪತಿ ವಿಪರೀತ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಕೇಳಿ ಬಂದಿದೆ.