Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೂತನ ಬಸ್ ನಿಲ್ದಾಣ, ವಸತಿ ಗೃಹ ಉದ್ಘಾಟಿಸಿದ ಸಚಿವ ರಾಮಲಿಂಗಾರೆಡ್ಡಿ
KARNATAKA

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೂತನ ಬಸ್ ನಿಲ್ದಾಣ, ವಸತಿ ಗೃಹ ಉದ್ಘಾಟಿಸಿದ ಸಚಿವ ರಾಮಲಿಂಗಾರೆಡ್ಡಿ

By ಸುರೇಶ್‌

ವಿಜಯಪುರ : ಇಂದು ವಿಜಯಪುರದಲ್ಲಿ ಸಾರಿಗೆ ಸಚಿವರಾದಂತ ರಾಮಲಿಂಗಾರೆಡ್ಡಿ ಅವರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ ಬರುವಂತಹ ಈ ಕೆಳಕಂಡ ನೂತನ ಬಸ್ ನಿಲ್ದಾಣ ಸಿಬ್ಬಂದಿಗಳ ವಸತಿ ಗೃಹ ಘಟಕಗಳಿಗೆ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.

1) ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಬೇವೂರಿನಲ್ಲಿ 1 ಎಕರೆ ವಿಸ್ತೀರ್ಣದಲ್ಲಿ, ರೂ.450 ಲಕ್ಷಗಳ ವೆಚ್ಚದಲ್ಲಿ ಬಸ್ ನಿಲ್ದಾಣದ ಶಂಕು ಸ್ಥಾಪನೆ ಹಾಗೂ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ 1 ಎಕರೆ ವಿಸ್ತೀರ್ಣದಲ್ಲಿ ರೂ.300 ಲಕ್ಷಗಳ ವೆಚ್ಚದಲ್ಲಿ ಬಸ್ ನಿಲ್ದಾಣದ ಶಂಕು ಸ್ಥಾಪನೆ.

2) ವಿಜಯಪುರ ಜಿಲ್ಲೆಯ ನಾಗಠಾಣದಲ್ಲಿ 10 ಗುಂಟೆ ವಿಸ್ತೀರ್ಣದಲ್ಲಿ ರೂ.150 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣದ ಉದ್ಘಾಟನೆ ಹಾಗೂ ದೇವರ ಹಿಪ್ಪರಗಿಯಲ್ಲಿ 1.16 ಎಕರೆ ಪ್ರದೇಶದಲ್ಲಿ ಅಂದಾಜು ರೂ.400 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣದ ಉದ್ಘಾಟನೆ
ಮತ್ತು ಸಿಂದಗಿ ಘಟಕದ ಪಕ್ಕದಲ್ಲಿ ಸಿಬ್ಬಂದಿಗಳಿಗಾಗಿ 3.8 ಎಕರೆ ಪ್ರದೇಶದಲ್ಲಿ ಅಂದಾಜು ರೂ.250 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಲಾದ ನೂತನ ವಸತಿ ಗೃಹಗಳ ಉದ್ಘಾಟನೆ.

3) ಸಿಂದಗಿ ಬಸ್ ನಿಲ್ದಾಣಕ್ಕೆ ಪೂಜ್ಯ ಶ್ರೀ ಚನ್ನವೀರ ಸ್ವಾಮಿಜಿ ಬಸ್ ನಿಲ್ದಾಣ ಎಂದು ನಾಮಕರಣ.

4) ರಾಯಚೂರು ಜಿಲ್ಲೆಯ ಸಿರವಾರದಲ್ಲಿ 1 ಎಕರೆ ಪ್ರದೇಶದಲ್ಲಿ ಅಂದಾಜು ರೂ.250 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಬಸ್ ನಿಲ್ದಾಣದ ಉದ್ಘಾಟನೆ

5) ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲ್ಲೂಕಿನ ಮಾದ್ವಾರದಲ್ಲಿ 1.03 ಗುಂಟೆ ವಿಸ್ತೀರ್ಣದಲ್ಲಿ ರೂ.50 ಲಕ್ಷಗಳ ವೆಚ್ಚದಲ್ಲಿ ನಿರ್ಮಿಸಿದ ನೂತನ ಬಸ್ ನಿಲ್ದಾಣದ ಉದ್ಘಾಟನೆ

ಹಾಗೂ ಇದೇ ಸಂದರ್ಭದಲ್ಲಿಇಂಡಿ ತಾಲೂಕಿನ ಬಬಲಾದ ಗ್ರಾಮದ ಒಡಲ ಧನಿ ಸ್ವಹಸಹಾಯ ಸಂಘದ ಶ್ರೀಮತಿ ಭುವನೇಶ್ವರಿ ಕಾಂಬಳೆ ಇವರ ಮಾರ್ಗದರ್ಶನದಲ್ಲಿ ಮಹಿಳಾ ಸ್ವಸಹಾಯ ಸಂಘವು ಸಾವಯವ ಶೇಂಗಾ ಹೋಳಿಗೆ, ರೊಟ್ಟಿ ಇತ್ಯಾದಿ ಗ್ರಾಮೀಣ ಆಹಾರ ಪದಾರ್ಥಗಳು ಮಾರಾಟ ಮಾಡುವ ಯೋಜನೆಗೆ ಸ್ಥಳೀಯವಾಗಿ ಹಿನ್ನಡೆಯಾಗಿದ್ದ ಸಮಯದಲ್ಲಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಗಿ ಕಣಜ, ಸಾವಯವ ಸಂತೆ ಇತ್ಯಾದಿ ಗುಂಪುಗಳಲ್ಲಿ ತಮ್ಮ ಸಾವಯವ ಶೇಂಗಾ ಹೋಳಿಗೆ ಇತ್ಯಾದಿಗಳನ್ನು ಮಾರಾಟ ಮಾಡಲು ಪ್ರಯತ್ನಿಸಿ,ಇದರಿಂದ ಬೆಂಗಳೂರಿನಲ್ಲಿ ಅತಿಹೆಚ್ಚಿನ ಬೇಡಿಕೆ ಬಂದು ಲಕ್ಷ ಲಕ್ಷ ರೂಪಾಯಿಗಳ ಆದಾಯಗಳಿಸಿರುತ್ತಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸಮಾರಂಭಕ್ಕೆ ಆಗಮಿಸಿದ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಿಗೆ ಒಡಲ ಧ್ವನಿ ಸಂಘದ ಮಹಿಳೆಯರು ಸನ್ಮಾನ ಮಾಡಿ ಶೇಂಗಾ ಹೋಳಿಗಳನ್ನು ನೀಡಿ ಗೌರವಿಸಿರುತ್ತಾರೆ ಮತ್ತು ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಆಗುತ್ತಿರುವ ಉಪಯೋಗದ ಕುರಿತು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ವಲಸೆ ಹೋಗದೆ ಉದ್ಯೋಗ ಮಾಡುತ್ತಿರುವ ಕುರಿತ ಮಾಹಿತಿಯನ್ನು ಹಂಚಿಕೊಂಡಿರುತ್ತಾರೆ. ಮಹಿಳೆಯರ ಸನ್ಮಾನವನ್ನು ಸ್ವೀಕರಿಸಿದ ಮಾನ್ಯ ಸಚಿವರು ಸರ್ಕಾರವು ಜಾರಿಗೆ ತಂದ ಶಕ್ತಿ ಯೋಜನೆಯ ಉಪಯೋಗ ಪಡೆಯುತ್ತಿರುವ ಈ ಮಹಿಳೆಯರ ಕಾರ್ಯವನ್ನು ಪ್ರಶಂಶಿಸಿರುತ್ತಾರೆ.

ಈ ಸಂದರ್ಭದಲ್ಲಿ ರಾಯರೆಡ್ಡಿ ಸನ್ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಮಾನ್ಯ ಶಾಸಕರು ಯಲಬುರ್ಗಾ ಕ್ಷೇತ್ರ, ರಾಜಶೇಖರ ಬಸವರಾಜ ಹಿಟ್ನಾಳ್ ಮಾನ್ಯ ಸಂಸದರು ಕೊಪ್ಪಳ ಲೋಕಸಭಾ ಕ್ಷೇತ್ರ,‌ ರಾಧಾಕೃಷ್ಣ ದೊಡ್ಡಮನಿ ಮಾನ್ಯ ಸಂಸದರು,ಕಲ್ಬುರ್ಗಿ ಕ್ಷೇತ್ರ ವಿಠ್ಠಲ ಕಟಕದೊಂಡ ಮಾನ್ಯ ಶಾಸಕರು ನಾಗಠಾಣ ಕ್ಷೇತ್ರ, ಭೀಮನಗೌಡ ಪಾಟೀಲ ಮಾನ್ಯ ಶಾಸಕರು ದೇವರಹಿಪ್ಪರಗಿ ಕ್ಷೇತ್ರ, ಅಶೋಕ ಮನಗೂಳಿ, ಮಾನ್ಯ ಶಾಸಕರು ಸಿಂದಗಿ ಕ್ಷೇತ್ರ, ಜಿ ಹಂಪಯ್ಯ ನಾಯಕ ಮಾನ್ಯ ಶಾಸಕರು ಮಾನ್ವಿ ಕ್ಷೇತ್ರ, ಶರಣಗೌಡ ಕಂದಕೂರ ಮಾನ್ಯ ಶಾಸಕರು, ಗುರಮಠಕಲ್ ಕ್ಷೇತ್ರ, ಹಾಗೂ ರಾಚಪ್ಪ,ಕ ಆ ಸೇ, ವ್ಯವಸ್ಥಾಪಕ ನಿರ್ದೇಶಕರು, ಕಕರಸಾ ನಿಗಮ ರವರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

2 Mins Read

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

3 Mins Read

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

1 Min Read
Recent News

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

State News
KARNATAKA

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ನಾಲ್ಕೂ…

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಗ್ರಾಮೀಣ ಪ್ರದೇಶದ 50 ಸರ್ಕಾರಿ ಶಾಲೆಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಕೃತಕಬುದ್ಧಿಮತ್ತೆ ಪ್ರಯೋಗಾಲ ಸ್ಥಾಪಿಸಲು ಅನುಮೋದನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.