ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡಹಿಡಿಯುವ ಬಗ್ಗೆ ರಾಜ್ಯ ಸರ್ಕಾರವು ಆದೇಶವನ್ನು ಹೊರಡಿಸಿದೆ.
ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವ ಬಗೆ, ಉಲ್ಲೇಖಿತ ದಿನಾಂಕ 25,11.2024ರ ಸುತ್ತೋಲೆಯಲ್ಲಿ ರಾಜ್ಯ, ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿರುತ್ತದೆ. ಮುಂದುವರೆದು ದಿನಾಂಕ:29.03.2025ರ ಸುತ್ತೋಲೆಯಲ್ಲಿ ದಿನಾಂಕ:25.11.2024ರ ನಂತರ ಹೊರಡಿಸಿರುವ ಅಧಿಸೂಚನೆಗಳನ್ನು, ಕೂಡಲೇ ಹಿಂಪಡೆಯುವಂತೆ ಸೂಚಿಸಲಾಗಿರುತ್ತದೆ ಅಂತ ತಿಳಿಸಿದೆ.