ದಕ್ಷಿಣ ಕನ್ನಡ ಜಿಲ್ಲೆ : ರಾಜ್ಯದಲ್ಲಿ ಭೀಕರ ಅಪಘಾತದಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದು, ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಪುರುಷಗಡ್ಡೆಯಲ್ಲಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.
ಮೃತರನ್ನು ಪ್ರಶಾಂತ್ ಹಾಗೂ ಬೆಳ್ಮನೆ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.