ಕಿಶ್ತ್ವಾರ್ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನ ಚತ್ರು ಪ್ರದೇಶದಲ್ಲಿ ಪ್ರಮುಖ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಯುತ್ತಿದ್ದು, ಜೈಶ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆಗಳು ಹತ್ಯೆ ಮಾಡಿವೆ.
ಏಪ್ರಿಲ್ 10ರಿಂದ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು(SOG) ನೇತೃತ್ವದಲ್ಲಿ ತೀವ್ರಗೊಂಡ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಹೊಸ ಎನ್‌ಕೌಂಟರ್ ನಡೆಯಿತು. ನಂತರದ ಗುಂಡಿನ ಚಕಮಕಿಯಲ್ಲಿ ಮೂವರು ಜೈಶ್ ಉಗ್ರ ಸಂಘಟನೆಯ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಈ ಪ್ರದೇಶದಲ್ಲಿ ನಿರಂತರ ಮಳೆಯ ಹೊರತಾಗಿಯೂ, ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ. ಇತ್ತೀಚಿನ ದಿನಗಳಲ್ಲಿ ಕಿಶ್ತ್ವಾರ್‌ನಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆಗಳಲ್ಲಿ ಇದು ಒಂದಾಗಿದ್ದು, ಈ ಪ್ರದೇಶದಲ್ಲಿನ ಉಗ್ರಗಾಮಿ ಚಟುವಟಿಕೆಗೆ ಗಮನಾರ್ಹ ಹೊಡೆತ ಎಂದು ಪರಿಗಣಿಸಲಾಗಿದೆ.
White Knight Corps of the Indian Army tweets, "In the ongoing operations at Chhatru, Kishtwar, despite bad and inclement weather, two more Pakistani terrorists have been eliminated. A large quantity of war like stores including one AK and one M4 rifle have been recovered.… pic.twitter.com/DEW7UFuzl5
— ANI (@ANI) April 12, 2025