ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಾಲಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ಬಾಲಕಿಯ ಮೃತದೇಹವನ್ನು ಮನೆಗೆ ತಲುಪಿಸಲಾಗಿದೆ.
ಹುಬ್ಬಳ್ಳಿಯಲ್ಲಿರುವ ಬಾಡಿಗೆ ಮನೆಗೆ ಬಾಲಕಿಯ ಮೃತದೇಹವನ್ನು ಹಸ್ತಾಂತರಿಸಲಾಗಿದ್ದು, ಬಾಲಕಿಯ ಶವವನ್ನು ನೋಡಿ ಸಂಬಂಧಿಗಳು ಕಣ್ಣೀರು ಹಾಕುತ್ತಿದ್ದಾರೆ.
ಘಟನೆ ಹಿನ್ನೆಲೆ
ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಮಗುವನ್ನು ಚಾಕೋಲೆಟ್ ಆಸೆ ತೋರಿಸಿ ಹೊತ್ತೊಯ್ದ ಕಾಮುಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿದ್ದ. ಅಶೋಕನಗರದ ಪಾಳು ಮನೆಯ ಶೆಡ್ ನಲ್ಲಿ ಬಾಲಕಿ ಶವವಿಟ್ಟು ಪರಾರಿಯಾಗಿದ್ದ. ಆರೋಪಿಯನ್ನು ಅಶೋಕನಗರ ಠಾಣೆ ಪೊಲೀಸರು 24ಗಂಟೆಯೊಳಗೆ ಬಂಧಿಸಿದ್ದರು.
ಹುಬ್ಬಳ್ಳಿಯಲ್ಲಿ ಬಿಹಾರದ ಯುವಕನಿಂದ ಐದು ವರ್ಷದ ಬಾಲಕಿಯನ್ನು ಹತ್ಯೆ ಮಾಡಿದಂತ ಆರೋಪಿಯನ್ನು ಬಂಧಿಸೋದಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಂತ ಸಂದರ್ಭದಲ್ಲಿ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದರು ಎನ್ನಲಾಗಿತ್ತು. ಆದರೇ ಆ ಬಳಿಕ ಪೊಲೀಸರು ನಡೆಸಿದಂತ ಎನ್ ಕೌಂಟರ್ ನಲ್ಲಿ ಬಿಹಾರ ಮೂಲದ ರಿತೇಶ್ ಬಲಿಯಾಗಿದ್ದಾನೆ ಎಂಬುದಾಗಿ ಕಮೀಷನರ್ ಶಶಿಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಇನ್ನೂ ಈ ದಾಳಿಯಲ್ಲಿ ಓರ್ವ ಪಿಎಸ್ಐ, ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಗಾಯಾಳು ಪೊಲೀಸರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.