ವಿಜಯಪುರ : ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿತರಾಗಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇದೀಗ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟಿಂಗ್ ಬೀಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಅಷ್ಟು ಸುಲಭವಾದದ್ದಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಗೆ ನನ್ನನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲು ಷಡ್ಯಂತ್ರ ಮಾಡಿದ್ದರೊ, ಅದೇ ರೀತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದರು. ಆದರೆ ಸಿಎಂ ಸಿದ್ದರಾಮಯ್ಯ ಅವರನ್ನು ಯಾವುದೇ ಕಾರಣಕ್ಕೂ ಅಷ್ಟು ಸುಲಭವಾಗಿ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರವಾಗಿ ಶಾಸಕ ಬಸನಗೌಡ ಪಾಟೀಲ ಇದೀಗ ಬ್ಯಾಟಿಂಗ್ ಬೀಸಿದ್ದಾರೆ.