ಬೆಳಗಾವಿ : ಬೆಳಗಾವಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ರೈಲ್ವೆ ನಿಲ್ದಾಣದಿಂದ ಅರ್ಧ ಕಿ.ಮೀ. ದೂರದಲ್ಲಿ ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದು, ಮೂರು ಬೋಗಿಗಳು ಪಕ್ಕಕ್ಕೆ ಜಾರಿವೆ. ಸ್ಥಳಕ್ಕೆ ರೈಲ್ವೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.