ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣ ಸಂಬಂಧ ಲೋಕಾಯುಕ್ತದಿಂದ ಬಿ-ರಿಪೋರ್ಟ್ ಸಲ್ಲಿಸಲಾಗಿತ್ತು. ಈ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯವನ್ನು ಮಧ್ಯಾಹ್ನ 2.45 ಕ್ಕೆ ಮುಂದೂಡಿಕೆ ಮಾಡಿದೆ.
ಮುಡಾ ಹಗರಣದಲ್ಲಿ ಬಿ-ರಿಪೋರ್ಟ್ ಸಲ್ಲಿಸಿದ್ದಂತ ಲೋಕಾಯುಕ್ತದ ನಿರ್ಧಾರವನ್ನು ದೂರುದಾರ ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತ್ತು. ವಾದ-ಪ್ರತಿವಾದ ಆಲಿಸಿದ್ದಂತ ಕೋರ್ಟ್, ಇಂದು ಮಧ್ಯಾಹ್ನ 2.45 ಕ್ಕೆ ವಿಚಾರಣೆ ಮುಂದೂಡಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ 14 ಮುಡಾ ಸೈಟ್ ಹಗರಣ ಸಂಬಂಧ ನಾಳೆ ಮಹತ್ವದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಹೀಗಾಗಿ ಎಲ್ಲರ ಚಿತ್ತ ಜನಪ್ರತಿನಿಧಿಗಳ ತೀರ್ಪಿನತ್ತ ನೆಟ್ಟಿದೆ.