ಯಾದಗಿರಿ : ಸಹೋದರಿಯನ್ನು ನೋಡಲು ಯುವಕನೊಬ್ಬ ಬೈಕ್ ಮೇಲೆ ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿಯೊಂದು ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಯಾದಗಿರಿ ನಗರದ ಎಪಿಎಂಸಿ ಯಾರ್ಡ್ ಬಳಿ ನಡೆದಿದೆ.
ಮೃತ ಯುವಕನನ್ನು ಖಾಜಾ ಪಟೇಲ್ (20) ಎಂದು ತಿಳಿದುಬಂದಿದೆ.ಯುವಕ ವಡಿಗೇರಾ ತಾಲೂಕಿನ ಬಬಲಾದ ಗ್ರಾಮದ ನಿವಾಸಿಯಾಗಿದ್ದು, ತನ್ನ ಸಹೋದರಿಯನ್ನು ನೋಡಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿ ಮೈಮೇಲೆ ಬಿದ್ದಿದೆ. ಕೂಡಲೆ ಯುವಕ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ.
ಹೈವೋಲ್ವೇಜ್ ಲೈನ್ ಆಗಿದ್ದ ಕಾರಣ ವಿದ್ಯುತ್ ತಂತಿ ಯುವಕನ ಬೆನ್ನಿನೊಳಗೆ ಹೊಕ್ಕಿದೆ. ಘಟನೆಗೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.