ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆಗಿನ ಲಾರಿ ಮಾಲೀಕರ ಸಂಘದ ಜೊತೆಗಿನ ಸಭೆ ವಿಫಲವಾಗಿತ್ತು. ಆ ಬಳಿಕ ಎರಡನೇ ಸುತ್ತಿನಲ್ಲಿ ಸಿಎಂ ಸಿದ್ಧರಾಮಯ್ಯ ಜೊತೆಗೆ ಸಭೆ ನಡೆಸಲಾಗಿತ್ತು. ಆದರೇ ಸಿಎಂ ಸಿದ್ಧರಾಮಯ್ಯ ಜೊತೆಗಿನ ಎರಡನೇ ಸಂಧಾನ ಸಭೆಯೂ ವಿಫಲವಾಗಿದ್ದು, ರಾಜ್ಯದಲ್ಲಿ ಲಾರಿ ಮುಷ್ಕರ ಮುಂದುವರೆಯಲಿದೆ.
ಮುಖ್ಯಮಂತ್ರಿ ಅವರು ಇಂದು ಕಾವೇರಿಯಲ್ಲಿ ಮುಷ್ಕರ ನಿರತ ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು:
• ಈ ಬಾರಿ ಬಜೆಟ್ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮುಖ್ಯಮಂತ್ರಿ ಅವರು ಮನವಿ ಮಾಡಿದರು.
• ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
• ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ.
• ಸಂಚಾರಿ ದಟ್ಟಣೆ ಅವಧಿಯಲ್ಲಿ ನಗರದ ಒಳಗೆ ಲಾರಿಗಳು ಪ್ರವೇಶಿಸುವುದರ ಬಗ್ಗೆ ಇರುವ ನಿರ್ಬಂಧ ತೆರವು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಕುರಿತಾಗಿ ಇನ್ನೊಮ್ಮೆ ಲಾರಿ ಮಾಲಿಕರ ಸಂಘದೊಂದಿಗೆ ಸಭೆ ನಡೆಸಲಾಗುವುದು ಎಂದರು.
• ಗೃಹ ಸಚಿವ ಜಿ.ಪರಮೇಶ್ವರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.