ಬೆಂಗಳೂರು: ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ. ಈ ಸಭೆಯ ಮುಖ್ಯಾಂಶಗಳು ಈ ಕೆಳಗಿವೆ ಓದಿ.
* ಈ ಬಾರಿ ಬಜೆಟ್‌ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡುತ್ತೇನೆ.
* ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲೀಕರು ಸಹಕರಿಸಬೇಕು.
* ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ.
* ಸಂಚಾರಿ ದಟ್ಟಣೆ ಅವಧಿಯಲ್ಲಿ ನಗರದ ಒಳಗೆ ಲಾರಿಗಳು ಪ್ರವೇಶಿಸುವುದರ ಬಗ್ಗೆ ಇರುವ ನಿರ್ಬಂಧ ತೆರವು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಕುರಿತಾಗಿ ಇನ್ನೊಮ್ಮೆ ಲಾರಿ ಮಾಲೀಕರ ಸಂಘದೊಂದಿಗೆ ಸಭೆ ನಡೆಸಲಾಗುವುದು.
BREAKING: ರಾಜ್ಯದಲ್ಲೊಂದು ‘ಹೃದಯ ವಿದ್ರಾವಕ’ ಘಟನೆ: ಔಷಧಿ ಕೊರತೆಯಿಂದ ‘ಸರ್ಕಾರಿ ಆಸ್ಪತ್ರೆ’ಯಲ್ಲಿ ಮಗು ಸಾವು
ವಾರಾಂತ್ಯದಲ್ಲಿ UPI ಕೆಲವು ಗಂಟೆಗಳ ಕಾಲ ಸ್ಥಗಿತವೇಕೆ ಗೊತ್ತಾ? ಇಲ್ಲಿದೆ ಕಾರಣ