ಚಿತ್ರದುರ್ಗ :ಬರುವ ಏಪ್ರಿಲ್ 21 ಸರ್ಕಾರಿ ನೌಕರರ ದಿನಾಚರಣೆಯಂದು ರಾಜ್ಯ ಸರ್ಕಾರ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಿದೆ. ಈಗಾಗಲೇ ಮುಖ್ಯಮಂತ್ರಿಗಳು ಯೋಜನೆ ಜಾರಿ ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಂಜೀವಿನಿ ಯೋಜನೆಯಿಂದ ಸರ್ಕಾರಿ ನೌಕರರರು ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ಉಚಿತ ಆರೋಗ್ಯ ಸೇವೆ ದೊರಕಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ.
ಕ್ರೀಡಾಕೂಟದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ನಡುವೆಯೂ 7ನೇ ವೇತನ ಆಯೋಗ ಶಿಫಾರಸ್ಸನ್ನು ಜಾರಿ ಮಾಡಿದೆ. ಇದರೊಂದಿಗೆ ಆರೋಗ್ಯ ಸಂಜೀವಿನಿ ಯೋಜನೆಗೂ ಅನುಮತಿ ನೀಡಿದೆ. ಸರ್ಕಾರಿ ನೌಕರರಿಗೆ ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸ್ಯಾಲರಿ ಪ್ಯಾಕಜ್ ಅಕೌಂಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಈ ಯೋಜನೆಯಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆ ಅಪಘಾತದಲ್ಲಿ ಮೃತಪಟ್ಟರೆ ರೂ.1 ಕೋಟಿ ಪರಿಹಾರ ನೀಡಲಾಗುವುದು. ಅಂಗವೈಕಲ್ಯತೆಗೆ ಒಳಗಾದರೆ ರೂ.35 ಲಕ್ಷದ ವರೆಗೆ ಪರಿಹಾರ ದೊರಕಲಿದೆ. ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ, ಗೃಹ, ಹಾಗೂ ವಾಹನ ಸಾಲ ಸೌಲಭ್ಯ ನೀಡಲಾಗುವುದು. ಇದೇ ತಿಂಗಳ ಅಂತ್ಯಕ್ಕೆ ನಿವೃತ್ತ ಐ.ಎ.ಎಸ್ ಅಧಿಕಾರಿ ಪರ್ವೇಜ್ ಅವರ ನೇತೃತ್ವದ ಎನ್.ಪಿ.ಎಸ್ ಕಮಿಟಿ ತನ್ನ ವರದಿಯನ್ನು ಸರ್ಕಾರಕ್ಕೆ ನೀಡಲಿದೆ. ನಂತರ ಸರ್ಕಾರದ ಮನವೊಲಿಸಿ, ಎನ್.ಪಿ.ಎಸ್. ರದ್ದುಪಡಿಸಿ ಒಪಿಎಸ್ ಜಾರಿಗೊಳಿಸಲು ಪ್ರಯತ್ನಿಸುವುದಾಗಿ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಮುಂಬರುವ ಮೇ ನಲ್ಲಿ ಶಿವಮೊಗ್ಗ ನಗರದಲ್ಲಿ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗುವುದು. ಸರ್ಕಾರಿ ನೌಕರರು ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಗಮನ ಹರಿಸಬೇಕು. ನೌಕರರು ಆತ್ಮ ವಂಚನೆ ಮಾಡಿಕೊಳ್ಳದೆ, ಕಚೇರಿ ಕೆಲಸಗಳನ್ನು ಶ್ರದ್ಧೆಯಿಂದ ನಿರ್ವಹಸುವಂತೆ ಸಿ.ಎಸ್.ಷಡಾಕ್ಷರಿ ಹೇಳಿದರು.