ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಮನೆಯಲ್ಲಿ ಮಲಗಿದ್ದ ತಂದೆ, ತಾಯಿ, ಅಕ್ಕನಿಗೆ ಚಾಕು ಇರಿದಿದ್ದಾನೆ.
ಸೋಲದೇವಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇದರಹಳ್ಳಿಯಲ್ಲಿ ಮನೆಯಲ್ಲಿ ಮಲಗಿದ್ದ ಅಕ್ಕ ಹಾಗೂ ತಾಯಿ, ತಂದೆ ಮೇಲೆ ಮಗ ಇದ್ದಕ್ಕಿದ್ದಂತೆ ಚಾಕು ಹಿಡಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ವಿನಾಯಕ ಲೇಔಟ್ ನಿವಾಸಿ ಕೃಷ್ಣಮೂರ್ತಿ (51) ಪಾರ್ವತಮ್ಮ (48) ನಯನಾ (24) ಹಲ್ಲೆಗೆ ಒಳಗಾದವರು. ಮೂವರಿಗೂ ಕೂಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಿನ್ನೆ ಬೆಳಗಿನ 3 ಗಂಟೆಗೆ ಸುಮಾರಿಗೆ ಹರ್ಷ ಎಂಬ ವಿದ್ಯಾರ್ಥಿ ಪೋಷಕರ ಮೇಲೆಯೇ ಈ ಕೃತ್ಯ ಎಸಗಿದ್ದಾನೆ. ಚಾಕುವಿನಿಂದ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾನೆ. ಕಾರದ ಪುಡಿ ಎರಚಿ ಮಗನ ಕೃತ್ಯ ತಡೆಯಲು ಮುಂದಾದರೂ ಆತ ಹಲ್ಲೆ ಮಾಡುವುದನ್ನು ಬಿಡಲಿಲ್ಲ. ವಿಚಾರ ತಿಳಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಗಿಲು ಒಡೆದು ಮನೆಯವರನ್ನು ರಕ್ಷಿಸಿದ್ದಾರೆ.