ಮೈಸೂರು : ಅಯೋಧ್ಯೆಯ ರಾಮಲಲ್ಲಾ ವಿಗ್ರಹ ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.
ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಮಂಗಳವಾರ ರಾಜಸ್ಥಾನದ ಬಿಕಾನೆರ್‌ನಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪಿತವಾಗಿರುವ ಶ್ರೀ ರಾಮ ಲಲ್ಲಾ ಮೂರ್ತಿಯನ್ನು ಕೆತ್ತಿದ ಕೀರ್ತಿಗಾಗಿ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ವಿಶ್ವವಿದ್ಯಾಲಯ (MGSU) ಈ ಗೌರವವನ್ನು ನೀಡಿದೆ. ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಬಾಬು ಕಿನ್‌ಕರ್ ಜೀ ಬಾಗಡೆ ಅವರು ವಿಶೇಷ ಸಮಾರಂಭದಲ್ಲಿ ಈ ಪ್ರತಿಷ್ಠಿತ ಗೌರವವನ್ನು ಅರುಣ್ ಯೋಗಿರಾಜ್‌ಗೆ ಪ್ರದಾನ ಮಾಡಿದರು.