ಬೆಂಗಳೂರು: ಬೆಂಗಳೂರು ಹವಾಮಾನ ಕ್ರಿಯಾ ಕೋಶ ಫೆಲೋಶಿಪ್ ನ ಎರಡು (02) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹವಾಮಾನ ಕ್ರಿಯಾ ಕೋಶದ ಅಧ್ಯಕ್ಷರಾದ ಪ್ರೀತಿ ಗೆಹ್ಲೋಟ್ ರವರು ತಿಳಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಪರವಾಗಿ ಹವಾಮಾನ ಕ್ರಿಯಾ ಕೋಶ (ಸಿಎಸಿ) ದಲ್ಲಿ ಹವಾಮಾನ ಬದಲಾವಣೆ ಮತ್ತು ನಗರ ಆಡಳಿತದ ಬಗ್ಗೆ ಆಸಕ್ತಿ ಹೊಂದಿರುವ ಉಜ್ವಲ ಮನಸ್ಸಿನ ವೃತ್ತಿಪರರಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಬೆಂಗಳೂರು ಎದುರಿಸುತ್ತಿರುವ ನಿಜ ಜೀವನದ ಸವಾಲುಗಳನ್ನು ಪರಿಹರಿಸಲು ಹೊಸ ದೃಷ್ಟಿಕೋನಗಳು, ಕೌಶಲ್ಯಗಳು ಮತ್ತು ನಾವೀನ್ಯತೆಯನ್ನು ತರಬಲ್ಲ ವ್ಯಕ್ತಿಗಳನ್ನು ತೊಡಗಿಸಿಕೊಳ್ಳಲು ಹವಾಮಾನ ಕ್ರಿಯಾ ಕೋಶವು ಪ್ರಯತ್ನಿಸುತ್ತದೆ.
ಈ ಹಿನ್ನೆಲೆಯಲ್ಲಿ, ಈ ಕೆಳಗಿನ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ:
* ಫೆಲೋ- ಎಂ.ಇ.ಆರ್, ಹವಾಮಾನ ಆಯವ್ಯಯ (1 ಹುದ್ದೆ)
* ಸಲಹೆಗಾರ – ಸಂವಹನ ಮತ್ತು ಪ್ರಚಾರ (1 ಹುದ್ದೆ)
12 ತಿಂಗಳ ಅವಧಿಯ ಈ ಹುದ್ದೆಗಳಿಗೆ ಆಹ್ವಾನಿಸಲಾಗುತ್ತಿದ್ದು, ತಿಂಗಳಿಗೆ 50,000 ರೂ. ವೇತನವನ್ನು ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಹವಾಮಾನ ಕ್ರಿಯಾ ಕೋಶ (CAC) ತಂಡದೊಂದಿಗೆ ನಿಕಟವಾಗಿ ಕೆಲಸ ಮಾಡುವುದರ ಜೊತೆಗೆ ಬೆಂಗಳೂರು ಹವಾಮಾನ ಕ್ರಿಯಾ ಯೋಜನೆ (BCAP) ಅನುಷ್ಠಾನಕ್ಕೆ ಕೊಡುಗೆ ನೀಡಬಹುದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು https://apps.bbmpgov.in/bcap/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ನಿಗದಿತ ಪ್ರಕ್ರಿಯೆಯನ್ನು ಅನುಸರಿಸಬೇಕು. ವಿವರವಾದ ಮಾಹಿತಿ ಮತ್ತು ಮಾರ್ಗಸೂಚಿಗಳು ಪೋರ್ಟಲ್‌ನಲ್ಲಿ ಲಭ್ಯವಿದೆ. ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ ಏಪ್ರಿಲ್ 30, 2025 ಆಗಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಮೇ 15, 2025 ರಿಂದ ಕೆಲಸವನ್ನು ಪ್ರಾರಂಭಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು bbmpclimateactioncell@gmail.com ಗೆ ಮೇಲ್ ಮಾಡಿ.