ಬೆಂಗಳೂರು : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಒಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ದಂಪತಿಗಳ ಶವ ಪತ್ತೆಯಾಗಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಈ ಒಂದು ಘಟನೆ ನಡೆದಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಪರ್ವೀನ್ ಮತ್ತು ಮೆಹಬೂಬ್ ಎನ್ನುವ ದಂಪತಿಗಳ ಶವ ಪತ್ತೆಯಾಗಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ಮೆಹಬೂಬ್ ಪತ್ನಿ ಪರ್ವೀನ್ ಶವ ಪತ್ತೆಯಾದರೆ, ಇನ್ನು ನೆಲದ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ಪತಿ ಮೆಹಬೂಬ್ ಶವ ಪತ್ತೆಯಾಗಿದೆ. ಇಬ್ಬರು ಕಟ್ಟಡ ನಿರ್ಮಾಣದ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಸಂಜಯನಗರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.