ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಲಾ ಪ್ರವೇಶಕ್ಕೆ ಕನಿಷ್ಠ ವಯೋಮಿತಿಯನ್ನು ಕಡಿಮೆಗೊಳಿಸಲಾಗಿದೆ. ಈ ವರ್ಷ ಮಾತ್ರವೇ 5 ವರ್ಷ 5 ತಿಂಗಳು ನಿಗದಿ ಪಡಿಸಲಾಗಿದೆ.
ಒಂದನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯನ್ನು 5 ವರ್ಷ 5 ತಿಂಗಳಿಗೆ ನಿಗದಿ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಜೂನ್ 1ಕ್ಕೆ 5 ವರ್ಷ 5 ತಿಂಗಳು ಪೂರೈಸಿದ ಮಕ್ಕಳು ಒಂದನೇ ತರಗತಿಗೆ ಪ್ರವೇಶ ಪಡೆಯಬಹುದು. ಈ ಅವಕಾಶ 2025-26ನೇ ಸಾಲಿಗೆ ಮಾತ್ರ ಅನ್ವಯವಾಗಲಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ರಾಜ್ಯ ಶಿಕ್ಷಣ ನೀತಿಯ ನಿಯಮಗಳನ್ನು ಪಾಲನೆ ಮಾಡಲಾಗುವುದು.
ಇದೇ ಶೈಕ್ಷಣಿಕ ಸಾಲಿನಿಂದ ಎಲ್‌ಕೆಜಿ ಪ್ರವೇಶಕ್ಕೆ ಕನಿಷ್ಠ ವಯೋಮಿತಿ 4 ವರ್ಷ, ಯುಕೆಜಿ ಪ್ರವೇಶಕ್ಕೆ 5 ವರ್ಷ ಕಡ್ಡಾಯಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಒಂದನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯನ್ನು 5 ವರ್ಷ 5 ತಿಂಗಳಿಗೆ ನಿಗದಿ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಜೂನ್ 1ಕ್ಕೆ 5 ವರ್ಷ 5 ತಿಂಗಳು ಪೂರೈಸಿದ ಮಕ್ಕಳು ಒಂದನೇ ತರಗತಿಗೆ ಪ್ರವೇಶ ಪಡೆಯಬಹುದು. ಈ ಅವಕಾಶ 2025-26ನೇ ಸಾಲಿಗೆ ಮಾತ್ರ ಅನ್ವಯವಾಗಲಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ರಾಜ್ಯ ಶಿಕ್ಷಣ… pic.twitter.com/622WEAqBdd
— DIPR Karnataka (@KarnatakaVarthe) April 17, 2025
ಬೆಂಗಳೂರು-ಮುರುಡೇಶ್ವರ, ಬೆಂಗಳೂರು-ಕಣ್ಣೂರು ಎಕ್ಸ್ ಪ್ರೆಸ್’ಗೆ ಆಧುನಿಕ ಎಲ್‌ಎಚ್‌ಬಿ ಬೋಗಿ ಜೋಡಣೆ
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!