ಬೆಂಗಳೂರು: ಇಂದಿನ ಜಾತಿಗಣತಿ ವರದಿ ಸಂಬಂಧ ನಡೆದಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಎಲ್ಲಾ ಸಚಿವರು ಅಭಿಪ್ರಾಯ ತಿಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ ಅಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಇಂದಿನ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಾತಿಗಣತಿ ವರದಿಯ ಬಗ್ಗೆ ಸಚಿವರು ತಮ್ಮ ಅಭಿಪ್ರಾಯ ತಿಳಿಸುವಂತೆ ಸಿಎಂ ಸೂಚಿಸಿದ್ದಾರೆ. ಮೌಖಿಕವಾಗಿ ನೀಡಬಹುದು ಅಥವಾ ಲಿಖಿತವಾಗಿ ನೀಡಬಹುದಾಗಿದೆ. ಸಚಿವರು ಅಭಿಪ್ರಾಯವನ್ನು ಇಂದು ಅಥವಾ ನಾಳೆ ನೀಡಬಹುದು ಎಂದರು.
ಇಂದಿನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯ ಬಗ್ಗೆ ಚರ್ಚೆಯಾಗಿದೆ. ಆದರೇ ಯಾವುದೇ ತೀರ್ಮಾನ ಆಗಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಆಗಲಿದೆ. ಮುಂದಿನ ಕ್ಯಾಬಿನೆಟ್ ನಲ್ಲಿ ಏನಾಗುತ್ತೋ ಗೊತ್ತಿಲ್ಲ ಅಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!
BREAKING : ಧಾರವಾಡದಲ್ಲಿ 2 ಬೈಕ್ ಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ!