ಮಂಗಳೂರು : ಮನೆಯ ಮುಂದೆ ಆಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಮುಂಡಗೋಡ ತಾಲ್ಲೂಕಿನ ಗುಂಜಾವತಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಮನೆಯ ಎದುರಿನ ನೀರಿನ ತೊಟ್ಟಿಗೆ ಆಕಸ್ಮಿಕವಾಗಿ ಬಿದ್ದ, ಎರಡೂವರೆ ವರ್ಷದ ವಿನಯ್ ಕುಂಬಾರ ಎನ್ನುವ ಮಗು ಸಾವನ್ನಪ್ಪಿದೆ.ಮನೆಯ ಮುಂದೆ ಆಟವಾಡುತ್ತಿದ್ದ ಮಗು, ನೀರಿನ ತೊಟ್ಟಿಗೆ ಬಿದ್ದಿರುವುದನ್ನು ಗಮನಿಸಿದ ಕುಟುಂಬದವರು ತಾಲ್ಲೂಕು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿಯೇ ಮಗು ಕೊನೆಯುಸಿರೆಳೆದಿದೆ. ಘಟನೆ ಕೋರಿದಂತೆ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.