ಶಿವಮೊಗ್ಗ : ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆಗೆ ಜನಿವಾರ ತೆಗೆಸಿರುವ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಈ ಒಂದು ಘಟನೆ ನಡೆದಿದೆ ಎನ್ನಲಾಗಿದೆ.
ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷ ಕೇಂದ್ರದಲ್ಲಿ ನಿನ್ನೆ ಎರಡನೇ ದಿನದ ಸಿಇಟಿ ಪರೀಕ್ಷೆ ವೇಳೆ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆದಿಸಿದ್ದಕ್ಕೆ ಇದೀಗ ಆಕ್ರೋಶ ವ್ಯಕ್ತವಾಗಿದ್ದು,
ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆ ಒಕ್ಕೂಟದಿಂದ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಇದೀಗ ಆಗ್ರಹಿಸಿದ್ದಾರೆ. ಪ್ರತಿಯೊಬ್ಬರಿಗೂ ಅವರದೇ ಆದಂತಹ ವೈಯಕ್ತಿಕ ಭಾವನೆಗಳಿರುತ್ತವೆ, ಈ ರೀತಿ ಮಾಡಿದವರ ವಿರುದ್ಧ ಸೂಕ್ತವಾದಂತಹ ಕ್ರಮ ಕೈಗೊಳ್ಳಿ ಎಂದು ಪರೀಕ್ಷಾ ಕೇಂದ್ರದ ಬಳಿ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆ ಕೆಲವರು ಆಗ್ರಹಿಸಿದ್ದಾರೆ.