ಶಿವಮೊಗ್ಗ: ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದ್ದು, ಆನ್‌ಲೈನ್ ನೋಂದಣಿಯ ಕೊನೆಯ ದಿನಾಂಕವನ್ನು ಏ. 25 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ ಇಮೇಲ್: aromangalore2021@gmail.com ಸಂಪರ್ಕಿಸಬಹುದಾಗಿದೆ.