ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಮೆಡಿಕಲ್ ಶಾಪ್ ಮತ್ತು ಜನರಲ್ ಸ್ಟೋರ್ ಆಕಸ್ಮಿಕ ಬೆಂಕಿಯಿಂದಾಗಿ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಗಾಯತ್ರಿನಗರದ ಮುಖ್ಯ ರಸ್ತೆಯಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ.
ಬೆಂಗಳೂರಿನಲ್ಲಿ ಮೆಡಿಕಲ್ ಶಾಪ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹೆಲ್ತ್ ಕೇರ್ ಫಾರ್ಮ ಮತ್ತು ಜನರಲ್ ಸ್ಟೋರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಗಾಯತ್ರಿನಗರದ ಮುಖ್ಯ ರಸ್ತೆಯಲ್ಲಿರುವ ಮೆಡಿಕಲ್ ಶಾಪ್ ನಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ.