ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೊದಲ ಪ್ರಕರಣದಲ್ಲಿ ಈಗಾಗಲೇ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇಂದು ಮತ್ತೊಂದು ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾಗೊಳಿಸಿ ಬಿಗ್ ಶಾಕ್ ನೀಡಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದಂತ ಕ್ರೈಂ ನಂಬರ್ 20/2024 ಪ್ರಕರಣದಲ್ಲಿ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಿಚಾರಣೆ ನಡೆಸಿದರು. ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ 2ನೇ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ಮತ್ತೊಂದೆಡೆ ಮಾಜಿ ಸಂಸದ ಪ್ರಜ್ವಲ್ ರೇವಣ್ಮ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಂಗ್ರಹಿಸಿದ ಡಿಜಿಟಲ್ ಸಾಕ್ಷ್ಯ ವಿಚಾರಣೆಗೆ ಕೋರ್ಟ್ ಅವಕಾಶ ನೀಡಿದೆ. ಐಟಿ ತಜ್ಞ ಶುಭನ್ ಸರ್ಕಾರ್ ಗೆ ಅವಕಾಶವನ್ನು ನೀಡಿ ಕೋರ್ಟ್ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ಪರ ವಕೀಲರು ವೀಡಿಯೋ ವೀಕ್ಷಣೆಗೆ ಅವಕಾಶವನ್ನು ಕೋರಿದ್ದರು.
BREAKING: 2023ನೇ ಸಾಲಿನ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಕಟ: 30 ಸರ್ಕಾರಿ ಅಧಿಕಾರಿ, ನೌಕರರಿಗೆ ಗೌರವ
Online Scam: ನಕಲಿ ವೆಬ್ಸೈಟ್ ಲಿಂಕ್ ಗಳ ಬಗ್ಗೆ ಜಾಗರೂಕರಾಗಿರಲು ಪ್ರವಾಸಿಗರಿಗೆ ಕೇಂದ್ರ ಸರ್ಕಾರ ಸೂಚನೆ