ಬೆಂಗಳೂರು : ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಎದುರಾಗುವ ಸಮಸ್ಯೆಗಳನ್ನು ಅಧ್ಯಯನ ಮಾಡಲು 12 ಮಂದಿ ಅಧಿಕಾರಿಗಳನ್ನು ಒಳಗೊಂಡ ಇ – ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 199 ಕ್ಕೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಅನುಗುಣವಾಗಿ ಇ-ಸ್ವತ್ತುಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉದ್ಭವಿಸುವ ಸಮಸ್ಯೆಗಳ ಹಾಗೂ ಸದರಿ ಸಮಸ್ಯೆಗಳ ಪರಿಹಾರದ ಭಾಗವಾಗಿ ಇ-ಸ್ವತ್ತು ಸುಧಾರಣೆ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸುವ ಹೊಣೆಗಾರಿಕೆಯನ್ನು ಈ ಸಮಿತಿಗೆ ವಹಿಸಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ಆಯವ್ಯಯ ಮತ್ತು ಲೆಕ್ಕಪತ್ರಗಳು) ನಿಯಮಗಳು, 2006 ರ ನಿಯಮ 28 ಮತ್ತು 30 ಕ್ಕೆ ತಿದ್ದುಪಡಿ ತಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕ್ರಮಬದ್ಧ ಆಸ್ತಿಗಳಿಗೆ ನಮೂನೆ – 9, 11A ಮತ್ತು ಕ್ರಮಬದ್ಧವಲ್ಲದ ಆಸ್ತಿಗಳಿಗೆ ನಮೂನೆ-11B ಅನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಡಿಜಿಟಲ್ ಸಹಿಯ ಮೂಲಕ ವಿತರಿಸಲು ಅವಕಾಶ ಕಲ್ಪಿಸಲಾಗಿದೆ.
ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿರುವ ತಿದ್ದುಪಡಿಗಳಿಗೆ ಅನುಗುಣವಾಗಿ, ಎದುರಾಗುವ ಸಮಸ್ಯೆಗಳನ್ನು ಅಧ್ಯಯನ ಮಾಡಲು12 ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.