ಬೆಂಗಳೂರು : ಬೆಂಗಳೂರಿನಲ್ಲಿ ಬೇಸಿಗೆ ಸಮಯದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.
ಹೌದು, ಬೇಸಿಗೆ ಸಮಯದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆಗೆ ಟ್ಯಾಂಕರ್ ನೀರು ಪೂರೈಕೆ ಲಾಬಿಗೆ ಪರಿಹಾರವಾಗಿ ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿ (BWSSB) ವತಿಯಿಂದ ‘ಸಂಚಾರಿ ಕಾವೇರಿ’ – ಬೆಂಗಳೂರಿಗೆ ಶುದ್ಧ ಕುಡಿಯುವ ನೀರು ಎಂಬ ವಿನೂತನವಾದ ಯೋಜನೆ ರೂಪಿಸಲಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪರಿಶೀಲನೆ ನಡೆಸಿದರು.
ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ರಾಮ ಪ್ರಸಾತ್ ಮನೋಹರ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಇದ್ದರು.