ಬೆಳಗಾವಿ : ರಾಜ್ಯದ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಇಂದು ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ಬೆಳಗಾವಿಯ ಟಿಳಕವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಪೌರಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಕಾಯಂಗೊಳಿಸಿ 17 ಸಂಬಳ ಕೊಟ್ಟಿದ್ದು ನಮ್ಮ ಸರ್ಕಾರ. ಕಸ ರವಾನೆ ಮಾಡುವ ಲಾರಿ ಚಾಲಕರನ್ನು ಕೂಡ ಖಾಯಂಗೊಳಿಸುತ್ತೇವೆ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ STP ಪ್ಲಾಂಟ್ ಗೆ ಜಮೀನು ಸ್ವಾಧೀನ ಆಗಿದೆ.ಸರ್ಕಾರ ನ್ಯಾಯಾಲಯದಲ್ಲಿ ಹಣವನ್ನು ಡೆಪಾಸಿಟ್ ಮಾಡಿದೆ.ಹೆಚ್ಚಿನ ಪರಿಹಾರ ನೀಡಿ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದರು.
ಹೆಸರು ಹೇಳುತ್ತಿದ್ದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಎದ್ದು ನಿಂತು ಮಾತನಾಡಲು ಮುಂದಾದರು.ಈ ವೇಳೆ ಸಿಎಂ ಸಿದ್ದರಾಮಯ್ಯ ನಾನು ಮಾತನಾಡುತ್ತೇನೆ ಕುಳಿತುಕೊಳ್ಳಮ್ಮ ಎಂದರು. ಸಚಿವೆ ಹೆಬ್ಬಾಳ್ಕರ್ ನನ್ನ ಗಮನಕ್ಕೆ ತಂದಿದ್ದು ಫೈಲ್ ನೋಡುತ್ತೇನೆ. ನೋಡದೆ ಆಶ್ವಾಸನೆ ಕೊಡಬಾರ.ದು ನನಗೆ ಎಲ್ಲಾ ಶಾಸಕರು ಆತ್ಮೀಯರು ನಾನು ರಾಜ್ಯದ ಮುಖ್ಯಮಂತ್ರಿ ಸ್ಮಾರ್ಟ್ ಸಿಟಿ ಯೋಜನೆಗೆ 6,928 ಕೋಟಿ ರೂಪಾಯಿ ಬಿಡುಗಡೆ ಆಗಿದೆ ಎಂದು ತಿಳಿಸಿದರು.
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ. ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಕಾರ್ಯಕ್ರಮಗಳು ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6,928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ. ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ.
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.
ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ.ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102… pic.twitter.com/KfqXxaYh2k
— Siddaramaiah (@siddaramaiah) April 20, 2025