ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಇಂದು ಮಧ್ಯಾಹ್ನ 12.45 ಕ್ಕೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ.
ನ್ಯಾ.ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ ಪೀಠದಿಂದ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ತೀರ್ಪು ಪ್ರಕಟವಾಗಲಿದೆ.
ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪ್ರಕರಣ ಒಟ್ಟುಗೂಡಿಸಿ ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಏಪ್ರಿಲ್ 4 ರಂದು ವಿಚಾರಣೆ ನಡೆಸಿ ಸುಪ್ರೀಂಕೋರ್ಟ್ ತೀರ್ಪು ಕಾಯ್ದಿರಿಸಿತ್ತು.