ಬೆಂಗಳೂರು: ನಾಳೆಯಿಂದ ಅಧಿಸೂಚನೆ ಹೊರಬೀಳಬೇಕಿದ್ದಂತ 222 ಗ್ರಾಮ ಪಂಚಾಯ್ತಿ ಉಪ ಚುನಾವಣೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯ್ತಿ ಉಪ ಚುನಾವಣೆ ಮುಂದೂಡಿಕೆ ಮಾಡುವಂತೆ ಮನವಿ ಮಾಡಿದ್ದರು. ಅಲ್ಲದೇ ಸಿಎಸ್ ಕೂಡ ಹೆಚ್ಚಿನ ಸಮಯಾವಕಾಶ ಕೋರಿದ್ದರು.
ಇನ್ನೂ ನಾಳೆಯಿಂದ ಗ್ರಾಮ ಪಂಚಾಯ್ತಿ ಉಪ ಚುನಾವಣೆಗೆ ಅಧಿಸೂಚನೆ ಹೊರ ಬಿದ್ದರೇ ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದಂತ ಸಚಿವ ಸಂಪುಟ ಸಭೆಗೂ ನೀತಿಸಂಹಿತೆ ಅಡ್ಡಿಯಾಗುತ್ತಿತ್ತು.
ಏಪ್ರಿಲ್.24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿರುವಂತ ರಾಜ್ಯ ಸಚಿವ ಸಂಪುಟ ಸಭೆಗೆ ಗ್ರಾಮ ಪಂಚಾಯ್ತಿ ಉಪ ಚುನಾವಣೆಯ ನೀತಿಸಂಹಿತೆ ಅಡ್ಡಿಯಾಗುವ ಕಾರಣ, ಉಪ ಚುನಾವಣೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.
ಅಂದಹಾಗೇ ನಾಳೆಯಿಂದ 222 ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದಂತ ಸ್ಥಾನಗಳಿಗೆ ಉಪ ಚುನಾವಣೆಗೆ ಅಧಿಸೂಚನೆ ಹೊರ ಬೀಳಬೇಕಿತ್ತು. ಆದರೇ ಇಂದು ದಿಢೀರ್ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ.
ಓಂ ಪ್ರಕಾಶ್ ಕೊಲೆ ಕೇಸ್: ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆದೇಶ
ಸ್ಮಾರ್ಟ್ ಮೀಟರ್ ಅವ್ಯವಹಾರ ತನಿಖೆಗೆ ಲೋಕಾಯುಕ್ತಕ್ಕೆ ದೂರು: ಡಾ.ಸಿ.ಎನ್.ಅಶ್ವತನಾರಾಯಣ್