Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗಿಗ್ ಕಾರ್ಮಿಕರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್
KARNATAKA

ರಾಜ್ಯದ ಗಿಗ್ ಕಾರ್ಮಿಕರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್

By kannadanewsnow0921/04/2025 9:40 PM

ಧಾರವಾಡ: ಗಿಗ್ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವಹಿಸುವ ಕಾರ್ಮಿಕರ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಅಗ್ರಿಗೇಟರ್ ಸಂಸ್ಥೆಗಳಿಂದ ಸುಂಕ ಸಂಗ್ರಹವನ್ನು ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಧಾರವಾಡದಲ್ಲಿ ವಾರ್ತಾ ಇಲಾಖೆಯ ಗಾಂಧಿ ಭವನ ಉದ್ಘಾಟನಾ ಸಮಾರಂಭದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೇ 5 ರಷ್ಟು ಸುಂಕ ಸಂಗ್ರಹಿಸಲಾಗುವುದು ಎಂಬ ವರದಿಗಳಿಗೆ ಆಕ್ಷೇಪ ವ್ಯಕ್ತವಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿದರು.

ಗಿಗ್ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಕೆಲಸ ಮಾಡುತ್ತಾರೆ. ಅವರು ಸಾಮಾನ್ಯವಾಗಿ ಸೈಕಲ್ ಹಾಗೂ ಮೋಟಾರ್ ಬೈಕ್‍ಗಳಲ್ಲಿ ಡೆಲಿವರಿ ಕೆಲಸ ಮಾಡುತ್ತಾರೆ. ಹೀಗೆ ಅವರು ರಸ್ತೆಯಲ್ಲಿ ಸಾಗುವಾಗ ಅವರು ಸೇವಿಸುವ ಇಂಗಾಲದ ಪ್ರಮಾಣವೂ ಅಧಿಕವಾಗಿರುತ್ತದೆ. ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ಕುಟುಂಬಕ್ಕಾಗಿ ಅವರು ದುಡಿಯುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸೆಸ್ ಸಂಗ್ರಹ ಮಾಡಲಾಗುವುದು ಎಂದು ವಿವರಿಸಿದರು.

ಒಬ್ಬ ಗಿಗ್ ಕಾರ್ಮಿಕ ಸರಾಸರಿ ಇಪ್ಪತ್ತು ವರ್ಷ ಕೆಲಸ ಅವನು ಸೇವಿಸುವ ಕಾರ್ಬನ್ ಡೈ ಆಕ್ಸೆಡ್ ಪ್ರಮಾಣವೂ ಸಾಕಷ್ಟು ಇರುತ್ತದೆ. ಅವರ ಯೋಗಕ್ಷೇಮ ಸಹ ಮುಖ್ಯ. ಇಲ್ಲಿ ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಅಥವಾ ನಷ್ಟ ಮಾಡುವ ವಿಚಾರ ಮುಖ್ಯವಲ್ಲ. ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಇಲಾಖೆಗೆ ಮುಖ್ಯ. ಅವರ ಕುಟುಂಬ ಮುಖ್ಯ. ಈ ನಿಟ್ಟಿನಲ್ಲಿ ನಾವು ಸೆಸ್ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಎಲ್ಲಾ ಅಗ್ರಿಗೇಟರ್ ಕಂಪನಿಗಳಿಗೆ ಸಾರಾಸಗಟಾಗಿ ಶೇ ಐದರಷ್ಟು ಸೆಸ್ ವಿಧಿಸುವುದಿಲ್ಲ. ಇದನ್ನು ಅವಸರದಲ್ಲಿ ಅಂತಿಮಗೊಳಿಸುವುದಿಲ್ಲ. ಗಿಗ್ ಮಂಡಳಿ ರಚನೆಗೆ ಸಂಪುಟ ಅನುಮೋದನೆ ನೀಡಿದೆ. ಮುಂದೆ ಮಂಡಳಿ ರಚನೆಯಾಗಲಿದೆ. ನಿಯಮ ರಚನೆ ಮಾಡುವಾಗ ಸಂಬಂಧಿಸಿದ ಎಲ್ಲರ ಅಭಿಪ್ರಾಯ ಪಡೆಯುತ್ತೇವೆ.

ಆಸಕ್ತರನ್ನು ಸೇರಿಸಿ ಚರ್ಚೆ ಮಾಡುತ್ತೇವೆ. ಅವರ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇವೆ. ಶೇ 5 ರಷ್ಟು ಸೆಸ್ ಯಾರಿಗೆ ಸಂಗ್ರಹಿಸಬೇಕು. ಶೇ 5ರ ಒಳಗೆ ಯಾರಿಗೆ ಸಂಗ್ರಹ ಮಾಡಬೇಕು ಎಂದು ಮುಂದೆ ತೀರ್ಮಾನ ಮಾಡುತ್ತೇವೆ. ಅಂತಿಮಗಾಗಿ ಒಂದು ನಿರ್ಣಯ ಕೈಗೊಳ್ಳುತ್ತೇವೆ ಎಂದರು.

ಇಂತಹ ಮಹತ್ವ ಪ್ರಯತ್ನದ ಹಿಂದೆ ನಮ್ಮ ಪಕ್ಷದ ಮುಖಂಡರಾದ ರಾಹುಲ್ ಗಾಂಧಿ ಅವರ ಶ್ರಮ ಇವೆ. ಗಿಗ್ ಕಾರ್ಮಿಕರ ಬಗ್ಗೆ ಅವರಿಗೆ ಅಪಾರವಾಗಿ ಕಾಳಜಿ ಇದೆ. ಭಾರತ್ ಜೋಡೊ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರು ಇದರ ಬಗ್ಗೆ ಆಸಕ್ತಿ ತೋರಿದ್ದರು. ರಾಜಸ್ಥಾನದಲ್ಲಿ ಇದರ ಬಗ್ಗೆ ಮಸೂದೆ ಬಂದಿದೆ. ಇಡೀ ದೇಶದಲ್ಲೇ ಒಂದು ಅತ್ಯುತ್ತಮ ಮಸೂದೆಯನ್ನು ನಮ್ಮ ರಾಜ್ಯ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದರು.

ನಾನು ಈಗಾಗಲೇ ಸುಮಾರು ಇಪ್ಪತ್ತು ಸಭೆಗಳನ್ನು ಮಾಡಿದ್ದೇನೆ. ಒಂದು ವರ್ಷ ಕಾಲಾವಕಾಶ ತೆಗೆದುಕೊಂಡಿದ್ದೇವೆ. ಯಾವುದನ್ನೂ ಅವಸರದಲ್ಲಿ ಮಾಡಿಲ್ಲ. ನಮ್ಮ ಗಿಗ್ ಮಸೂದೆಯನ್ನು ಮಾದರಿಯಾಗಿಟ್ಟುಕೊಂಡು ಬೇರೆ ಬೇರೆ ರಾಜ್ಯಗಳಲ್ಲೂ ಬರಲಿದೆ. ಇದು ನಮ್ಮ ಹೆಮ್ಮೆ ಎಂದು ಹೇಳಿದರು.

BIG NEWS: 15 ದಿನಗಳ ಮಟ್ಟಿಗೆ ಗ್ರಾಮ ಪಂಚಾಯ್ತಿ ಉಪ ಚುನಾವಣೆ ಮುಂದೂಡಿಕೆ

ರಾಜ್ಯ ಸರ್ಕಾರದ ಆನ್‍ಲೈನ್ ತರಬೇತಿ ಪೋರ್ಟಲ್, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಚಾಲನೆ

Share. Facebook Twitter LinkedIn WhatsApp Email

Related Posts

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM1 Min Read

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM1 Min Read

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM2 Mins Read
Recent News

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM

BIG NEWS : ಚಿಕ್ಕಮಗಳೂರಲ್ಲಿ ಸಾಕು ನಾಯಿಗಳಿಂದ ಡೆಡ್ಲಿ ಅಟ್ಯಾಕ್ : 7 ವರ್ಷದ ಬಾಲಕನ ಸ್ಥಿತಿ ಗಂಭೀರ!

20/04/2026 2:01 PM
State News
KARNATAKA

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

By kannadanewsnow0920/04/2026 2:23 PM KARNATAKA 1 Min Read

ಹುಬ್ಬಳ್ಳಿ: ಕಾನೂನು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು—ಶಿಕ್ಷಕರು, ಶಿಕ್ಷಕೇತರರು, ನ್ಯಾಯವಾದಿಗಳು ಹಾಗೂ ವಿದ್ಯಾರ್ಥಿಗಳು—ಜನಸಾಮಾನ್ಯರಲ್ಲಿ ಅವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಅರಿವು ಮೂಡಿಸುವ…

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM

BIG NEWS : ಚಿಕ್ಕಮಗಳೂರಲ್ಲಿ ಸಾಕು ನಾಯಿಗಳಿಂದ ಡೆಡ್ಲಿ ಅಟ್ಯಾಕ್ : 7 ವರ್ಷದ ಬಾಲಕನ ಸ್ಥಿತಿ ಗಂಭೀರ!

20/04/2026 2:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.