ಬೆಂಗಳೂರು : ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ಕ್ರಮವಹಿಸಲು ಸರ್ಕಾರದಿಂದ ನಡೆಸಲಾಗುತ್ತಿರುವ ಸಮೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಗಣತಿದಾರರನ್ನು (Enumerators) ನೇಮಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ
ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಸಂಬಂಧ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಏಕ ಸದಸ್ಯ ಆಯೋಗವು ದಿನಾಂಕ:27-03-2025 ರಂದು ಸನ್ಮಾನ ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು, ಸದರಿ ವರದಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕಾಗಿದ್ದು ಅದರಂತೆ ಸಮೀಕ್ಷೆ ನಡೆಸಲು ಶಿಫಾರಸ್ಸು ಮಾಡಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (1)ರಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ:28.03.2025 ರಂದು ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಮೀಕ್ಷೆ ನಡೆಸಲು ನಿರ್ಣಯಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸಮೀಕ್ಷೆ ನಡೆಸುವ ಪೂರ್ವದಲ್ಲಿ ಕೈಗೊಳ್ಳಬೇಕಾದ ಕ್ರಮದ ಕುರಿತು ಚರ್ಚಿಸುವ ಸಲುವಾಗಿ ದಿನಾಂಕ: 05-04-2025 ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮೀಕ್ಷೆಯನ್ನು ನಡೆಸಲು ಅಗತ್ಯವಿರುವ ಶಿಕ್ಷಕರನ್ನು ಪಡೆಯುವ ಬಗ್ಗೆ, ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸುವಂತೆ ನಿರ್ದೇಶನ ನೀಡಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (3)ರ ಪತ್ರ ಹಾಗೂ ಕ್ರಮಾಂಕ (4)ರ ಅರೆ ಸರ್ಕಾರಿ ಪತ್ರದಲ್ಲಿ ಸಮೀಕ್ಷೆ ನಡೆಸಲು ಜಿಲ್ಲಾವಾರು ಒಟ್ಟು 29330 ಗಣತಿದಾರರು(Enumerators) ಅವಶ್ಯವಿದ್ದು, ಹಾಗೂ ಶೇ. 20% (ಅಂದಾಜು 6000) Enumerators ಹೆಚ್ಚುವರಿಯಾಗಿ ಕಾಯ್ದಿರಿಸಿದ ಸಿಬ್ಬಂದಿಗಳನ್ನು ನಿಯೋಜಿಸಲು ಕೋರಿದ್ದು ಜನಸಂಖ್ಯಾವಾರು ಪ್ರತಿ ಜಿಲ್ಲೆಗೆ ಸಮೀಕ್ಷಾ ಕಾರ್ಯಕ್ಕೆ ಅಗತ್ಯವಿರುವ ಶಿಕ್ಷಕರನ್ನು ದಿನಾಂಕ:20.04.2025 ರಿಂದ 20.05.2025ರ ವರೆಗೆ (ತರಬೇತಿಯ ಅವಧಿಯನ್ನೊಳಗೊಂಡಂತೆ) ನಿಯೋಜಿಸಲು ಅಗತ್ಯ ಕ್ರಮವಹಿಸುವಂತೆ ಕೋರಿರುತ್ತಾರೆ.
ಮೇಲೆ ಓದಲಾದ ಕ್ರಮಾಂಕ (5)ರ ಪತ್ರದಲ್ಲಿ ದಿನಾಂಕ : 16/04/2025 ರಂದು ಸರ್ಕಾರದ ಅವರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಯನ್ನಯ ಸಮೀಕ್ಷೆಯನ್ನು Booth level officers model ಮೂಲಕ ನಡೆಸಬೇಕೆಂದು ನಿರ್ಣಯವಾಗಿರುತ್ತದೆ ಮತ್ತು ಕರ್ನಾಟಕ ರಾಜ್ಯದಲ್ಲಿ ಗುರುತಿಸಿರುವ ಒಟ್ಟಾರೆ 58932 Booth level officers ಗಳು ಇರುತ್ತಾರೆಂದು ತಿಳಿಸುತ್ತಾ, ಸಮೀಕ್ಷೆಗೆ ಅಗತ್ಯವಿರುವ ಜಿಲ್ಲಾವಾರು Enumerator ಗಳ ಸಂಖ್ಯಾಪಟ್ಟಿಯನ್ನು ಲಗತ್ತಿಸಿ ಕಳುಹಿಸಿರುತ್ತಾರೆ ಹಾಗೂ ಸದರಿ ಸಭೆಯಲ್ಲಿ ನಿರ್ಣಯವಾದಂತೆ ಸಮೀಕ್ಷೆಗೆ Enumerator ಗಳನ್ನಾಗಿ ಶಿಕ್ಷಕರನ್ನು ಮಾತ್ರ ನೇಮಿಸುವಂತೆ ಹಾಗೂ ಆಶಾ ಕಾರ್ಯಕರ್ತರು/ಅಂಗನವಾಡಿ ಶಿಕ್ಷಕರನ್ನು ಈ ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಬಾರದೆಂದು ನಿರ್ದೇಶನವಿರುತ್ತದೆ ಎಂದು ತಿಳಿಸುತ್ತಾ, ಸಮೀಕ್ಷಾ ಕಾರ್ಯಕ್ಕೆ ಒಟ್ಟಾರೆ 58932 ಶಿಕ್ಷಕರನ್ನು Booth level officers ಗಳಾಗಿ ಗುರುತಿಸಲು, ಅದರೊಂದಿಗೆ ಶೇ. 10 ರಷ್ಟು ಶಿಕ್ಷಕರನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲು ಮತ್ತು 10 ರಿಂದ 12 Enumerators ಸಮೀಕ್ಷೆಯನ್ನು ನಡೆಸಿ ಅವರು ಸಂಗ್ರಹಿಸಿದ ಮಾಹಿತಿಯನ್ನು ಪರಿಶೀಲಿಸಲು ಒಬ್ಬ Supervisor ನ್ನು ನೇಮಿಸಬೇಕಾಗಿದ್ದು, Supervisor ಗಳಾಗಿ ಶಾಲೆಯ ಮುಖ್ಯ ಶಿಕ್ಷಕರನ್ನು ನೇಮಿಸಲು ತಿಳಿಸಿ, ಸುಮಾರು 5000 Supervisor ಗಳನ್ನು ಗುರುತಿಸಲು ತಿಳಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ Supervisor / Enumerators ಗಳನ್ನು ಗುರುತಿಸಿ ಸಲ್ಲಿಸಿದ ನಂತರ ಜಿಲ್ಲಾ ಮಟ್ಟದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ನೇಮಕಾತಿ ಆದೇಶ ಹೊರಡಿಸಲಿರುವರೆಂದು, ಆದ ಪ್ರಯುಕ್ತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ Supervisor / Enumerators ಗಳನ್ನು ಗುರುತಿಸಿ ಸೂಕ್ತ ಆದೇಶ ಮತ್ತು ಸುತ್ತೋಲೆಯನ್ನು ಹೊರಡಿಸುವಂತೆ ಕೋರಿರುತ್ತಾರೆ.
ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್.ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ದತ್ತಾಂಶ ಸಂಗ್ರಹಿಸಲು ಸರ್ಕಾರದಿಂದ ನಡೆಸಲು ಉದ್ದೇಶಿಸಿರುವ ಸಮೀಕ್ಷಾ ಕಾರ್ಯವನ್ನು ಸರ್ಕಾರದ ಅಗತ್ಯ ಕಾರ್ಯವೆಂದು ಪರಿಗಣಿಸಿ, ಕರಾರುವಕ್ಕಾದ ಪ್ರಮಾಣೀಕೃತ ಮಾಹಿತಿಯನ್ನು ಪಡೆಯುವ ಸಲುವಾಗಿ ಸಮೀಕ್ಷಾ ಕಾರ್ಯಕ್ಕೆ ಅಗತ್ಯವಿರುವ ಒಟ್ಟಾರೆ 58932 ಶಿಕ್ಷಕರನ್ನು ಗಣತಿದಾರರನ್ನಾಗಿ (Enumerators) ಗುರುತಿಸಲು ಹಾಗೂ ಅದರೊಂದಿಗೆ ಶೇ.10 ರಷ್ಟು ಶಿಕ್ಷಕರನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲು ಹಾಗೂ 10 ರಿಂದ 12 ಗಣತಿದಾರರಿಗೆ ಓರ್ವ ಮೇಲ್ವಿಚಾರಕರಂತೆ ಒಟ್ಟು 5000 ಮೇಲ್ವಿಚಾರಕರನ್ನು ಗುರುತಿಸಲು ಆದೇಶಿಸಿದೆ. ಸಮೀಕ್ಷೆಗೆ ಅಗತ್ಯವಿರುವ ಜಿಲ್ಲಾವಾರು Enumerators ಗಳ ಸಂಖ್ಯಾಪಟ್ಟಿಯನ್ನು ಅನುಬಂಧದಲ್ಲಿ ಲಗತ್ತಿಸಿದೆ.
ಮುಂದುವರೆದು, ಬೆಂಗಳೂರು, ಕಲಬುರಗಿ ಮತ್ತು ಧಾರವಾಡ ಶಾಲಾ ಶಿಕ್ಷಣ ಅಯುಕ್ತಾಲಯಗಳು ಈ ಕೆಳಕಂಡ ಕ್ರಮಗಳನ್ನು ಕೈಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಆದೇಶಿಸಿದೆ.
1. ಬೆಂಗಳೂರು ಮತ್ತು ಮೈಸೂರು ವಿಭಾಗಗಳಿಗೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ನೋಡಲ್ ಅಧಿಕಾರಿಯಾಗಿದ್ದು, ಈ ಕುರಿತು ಸಂಪೂರ್ಣ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ಮಾಡತಕ್ಕದ್ದು.
2. ಅಪರ ಆಯುಕ್ತರು, ಕಲಬುರಗಿ ಶಾಲಾ ಶಿಕ್ಷಣ ಇಲಾಖೆ ಮತ್ತು ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಧಾರವಾಡ ಇವರು ಅನುಕ್ರಮವಾಗಿ ಕಲಬುರಗಿ ಮತ್ತು ಧಾರವಾಡ ವಿಭಾಗಳಿಗೆ ನೋಡಲ್ ಅಧಿಕಾರಿಗಳಾಗಿದ್ದು, ಈ ಕುರಿತು ಆಯಾ ವಿಭಾಗದ ಸಂಪೂರ್ಣ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ಮಾಡತಕ್ಕದ್ದು,
3. ಆಯುಕ್ತರು/ಅಪರ ಆಯುಕ್ತರು, ಸಂಬಂಧಪಟ್ಟ ಜಿಲ್ಲಾಧಿಕಾರಿಗಳು/ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇವರೊಂದಿಗೆ ಸಮನ್ವಯ ಸಾಧಿಸಿ ಸಮೀಕ್ಷಾ ಕಾರ್ಯವನ್ನು ನಿಗದಿತ ಅವಧಿಯೊಳಗೆ ನಿಯಮಾನುಸಾರ ಪೂರ್ಣಗೊಳಿಸತಕ್ಕದ್ದು.