ಬೆಂಗಳೂರು : ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದರೂ ಅದು ತಪ್ಪು. ಅದು ವಿಂಗ್ ಕಮಾಂಡರ್ ಆಗಿರಲಿ, ಯಾರೇ ಆಗಿರಲಿ , ತಪ್ಪು ತಪ್ಪೇ. ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ವಿಂಗ್ ಕಮಾಂಡರ್ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ. ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ. ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ.
ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ. ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ. ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ.
ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ…
— Siddaramaiah (@siddaramaiah) April 22, 2025
ಯುವಕನ ಮೇಲೆ ಹಲ್ಲೆ ನಡೆಸಿ ವಿಂಗಕಮಾಂಡರ್ ಬೋಸ್ ಸುಳ್ಳು ಹೇಳಿದ್ದಾನೆ. ಭಾಷೆ ವಿಚಾರಕ್ಕೆ ಈ ಒಂದು ಗಲಾಟೆ ನಡೆದಿದೆ ಎಂದು ವಿಡಿಯೋದಲ್ಲಿ ಹೇಳಿದ್ದ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ಕೂಡ ಇಬ್ಬರನ್ನು ಅರೆಸ್ಟ್ ಮಾಡಿದ್ದರು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ವಿಂಗ್ ಕಮಾಂಡರ್ ವಿರುದ್ಧವೇ ಎಫ್ ಐಆರ್ ದಾಖಲಾಗಿದೆ.
The other side of the IAF officer – biker road rage story. Man is seen brutally pushing the bike rider to ground & kicking him multiple times. He is also seen trying to chokehold the rider. In another video, the officer is seen throwing the rider's phone to ground to break it pic.twitter.com/KGViUwDJ8q
— Harish Upadhya (@harishupadhya) April 21, 2025