ರಾಮನಗರ : ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ಖಾಸಗಿ ಬಸ್ ಒಂದರ ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದಲ್ಲಿರುವ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಬಸ್ ನಲ್ಲಿದ್ದ ಸುಮಾರು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.ಬೆಂಗಳೂರಿನಿಂದ ಸಂಗಮಕ್ಕೆ ತೆರಳುವಾಗ ಈ ಒಂದು ಅಪಘಾತ ಸಂಭವಿಸಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದ ಬಳಿ ಈ ಒಂದು ಘಟನೆ ನಡೆದಿದೆ. ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ರಸ್ತೆ ತಿರುವಿನಲ್ಲಿ ಬ್ರೇಕ್ ಫೇಲ್ ಆಗಿ ಖಾಸಗಿ ಬಸ್ ಹಳ್ಳಕ್ಕೆ ಉರುಳಿದೆ. ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ಗಾಯಾಳುಗಳನ್ನು ತಕ್ಷಣ ಕನಕಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತಂತೆ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.