ಬೆಂಗಳೂರು : ಇದೇ ಏಪ್ರಿಲ್ 24 ರಿಂದ ಮೇ 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅದೇ ರೀತಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ಸಹ ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ ಅವರು, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಪಾವಿತ್ರತೆ ಕಾಪಾಡಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಕೊಂಡೊಯ್ಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ 06 ಮಾರ್ಗಗಳ ತಂಡಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ ಬೇಕಾಗಿರುತ್ತದೆ. ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಕೊಂಡ್ಯೊಯುವ 06 ವಾಹನಗಳಿಗೆ ಜಿಪಿಎಸ್ ಅಳವಡಿಸಲು ಸೂಚಿಸುವುದು. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಿಸುವುದು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ 144 ಸೆಕ್ಷನ್ ಎಂದು ಜಿಲ್ಲಾಧಿಕಾರಿಗಳ ಕಚೇರಿಯಿಂದ ಘೋಷಿಸಲಾಗುವುದು.
ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್ ಮೂಲಕ ದಾಖಲಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್ ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವಾಗ ಸಿ.ಸಿ ಟಿವಿ ವೀಕ್ಷಣೆಯಡಿಯಲ್ಲಿ ಕಾರ್ಯನಿರ್ವಹಿಸುವುದು ಮತ್ತು ಎಲ್ಲ ಕೊಠಡಿಗಳಿಗೆ ಸಿ.ಸಿ ಟಿವಿ ಅಳವಡಿಸುವುದು. ಚಿತ್ರದುರ್ಗ ಜಿಲ್ಲಾ ಪಂಚಾಯತ್‍ನಲ್ಲಿ ಜಿಲ್ಲೆಯ ಎಲ್ಲಾ 09 ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು.
ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಬಳಕೆ ನಿಷೇಧ
ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು, ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದುಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ.ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷಾ ವೇಳಾಪಟ್ಟಿ :
ಏ. 24 ರಂದು ಕನ್ನಡ, ಅರೇಬಿಕ್. ಏ. 25 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ. ಏ. 26 ರಂದು ಇತಿಹಾಸ, ಭೌತಶಾಸ್ತ್ರ. ಏ. 28 ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ. ಏ. 29 ರಂದು ಇಂಗ್ಲೀಷ್. ಮೇ. 02 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣಶಾಸ್ತ್ರ. ಮೇ. 03 ರಂದು ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ. ಮೇ. 05 ರಂದು ಅರ್ಥಶಾಸ್ತ್ರ, ಮೇ. 06 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ. ಮೇ. 07 ರಂದು ಹಿಂದಿ. ಮೇ. 08 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕøತ, ಫ್ರೆಂಚ್.