ನವದೆಹಲಿ : ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿ ದೆಹಲಿಗೆ ಬಂದಿದ್ದು, ಇದೀಗ ಮಹತ್ವದ ಸಭೆ ನಡೆಸಿದ್ದಾರೆ.
ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿದೇಶಾಂಗ ಕಾರ್ಯದರ್ಶಿ ಡಾ. ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಂಕ್ಷಿಪ್ತ ಸಭೆ ನಡೆಸಿದರು.
ಇಬ್ಬರು ಕನ್ನಡಿಗರಾದ ಶಿವಮೊಗ್ಗದ ಮಂಜುನಾಥ್, ಬೆಂಗಳೂರಿನ ಭರತ್ ಭೂಷಣ್ ಸೇರಿದಂತೆ 2̄8 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ಭಾರತಕ್ಕೆ ತೆರಳಲು ತಮ್ಮ ಎರಡು ದಿನಗಳ ಸೌದಿ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ.
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ, ಮೃತರಲ್ಲಿ ಹೆಚ್ಚಾಗಿ ಇತರ ರಾಜ್ಯಗಳಿಂದ ಪ್ರವಾಸಕ್ಕೆ ಬಂದವರಾಗಿದ್ದಾರೆ. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.
Delhi | Prime Minister Narendra Modi took a briefing meeting with EAM Dr S Jaishankar, NSA Ajit Doval, Foreign Secretary Vikram Misri and other officials in view of the #PahalgamTerroristAttack in Kashmir pic.twitter.com/F1LnHakHrU
— ANI (@ANI) April 23, 2025