ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಕನ್ನಡಿಗರ ರಕ್ಷಣೆಗೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರವು ಕಾರ್ಯಾಚರಣೆಗೆ ಇಳಿದಿದೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ…
— Siddaramaiah (@siddaramaiah) April 23, 2025