ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಯ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಾಲ್ವರು ಭಯೋತ್ಪಾದಕರ ಫೋಟೋಗಳನ್ನು ಬಿಡುಗಡೆ ಮಾಡಲಾಗಿದ್ದು, ಇವರು ಎಲ್ ಇಟಿ ಉಗ್ರ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಶಂಕಿಸಲಾಗಿದೆ. ಉಗ್ರರನ್ನು ಅಬು, ಆಸೀಫ್. ಸುಲೇಮಾನ್ ಎಂದು ಗುರುತಿಸಲಾಗಿದೆ.
ಘಟನೆಯ ನಂತರ, ಭದ್ರತಾ ಪಡೆಗಳು ಇಡೀ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ದಾಳಿಕೋರರನ್ನು ಇನ್ನೂ ಗುರುತಿಸಲಾಗಿಲ್ಲ, ಆದರೆ ದಾಳಿಯ ಹಿಂದಿನ ಉದ್ದೇಶ ಮತ್ತು ಜಾಲವನ್ನು ಪತ್ತೆಹಚ್ಚಲು ಗುಪ್ತಚರ ಸಂಸ್ಥೆಗಳು ಪ್ರತಿಯೊಂದು ಕೋನವನ್ನೂ ಪರಿಶೀಲಿಸುತ್ತಿವೆ.
A team of the National Investigation Agency (NIA) has reached the Pahalgam terrorist attack site. The team will assist the J&K Police with the investigation. pic.twitter.com/3MB0ozQkGv
— ANI (@ANI) April 23, 2025