ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ರಜೆಗಾಗಿ ತನ್ನ ಊರಿಗೆ ತೆರಳಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 31 ವರ್ಷದ ಯುವಕನನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧನಂಜಯ್ ಎಂದು ತಿಳಿದುಬಂದಿದೆ.
ಈ ಘಟನೆ ಮಂಗಳೂರಿನಲ್ಲಿ ಬಾಲಕಿಯ ಅಮ್ಮನ ಸ್ನೇಹಿತೆಯ ಮನೆಯಲ್ಲಿ ನಡೆದಿದ್ದು, ಆರೋಪಿ ಬಾಲಕಿಯ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ, ಧನಂಜಯ ಬಾಲಕಿಯನ್ನು ಬೆದರಿಸಿ ಬೆಂಗಳೂರಿಗೆ ಬಂದು ಬಾಲಕಿಯನ್ನ ಕರೆದುಕೊಂಡು ಹೋಗಿದ್ದ. ಆನಂತರ, ಸಕಲೇಶಪುರದ ಒಂದು ತೋಟದಲ್ಲಿ ಆಕೆಯನ್ನು ಬಚ್ಚಿಟ್ಟು, ನಿರಂತರವಾಗಿ ಅತ್ಯಾಚಾರವನ್ನು ಮುಂದುವರೆಸಿದ್ದಾನೆ ಎಂದು ತಿಳಿದುಬಂದಿದೆ.
ಬಾಲಕಿಯು ತನ್ನ ದುಃಸ್ಥಿತಿಯನ್ನು ಪೋಷಕರಿಗೆ ತಿಳಿಸಿದ ನಂತರ, ಅವರು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ವೈದ್ಯಕೀಯ ತಪಾಸಣೆಯಿಂದ ಅತ್ಯಾಚಾರದ ಆರೋಪ ದೃಢಪಟ್ಟಿದ್ದು, ಸೋಲದೇವನಹಳ್ಳಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿ ಧನಂಜಯನನ್ನು ಬಂಧಿಸಿದರು. ಲೈಂಗಿಕ ಅಪರಾಧಗಳಿಂದ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ