ಬೆಂಗಳೂರು: ಆರೋಗ್ಯ ಮೂಲಸೌಕರ್ಯವನ್ನು ವಿಸ್ತರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಸದಾ ಬದ್ಧವಾಗಿದೆ. ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಈ ಪ್ರತಿಯೊಂದು ಕಾಲೇಜುಗಳು ಆಸ್ಪತ್ರೆಯನ್ನು ಹೊಂದಿರುತ್ತವೆ ಮತ್ತು ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆರೈಕೆ ಘಟಕಗಳು, ಆಘಾತ ಕೇಂದ್ರಗಳು ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಗುರಿಯನ್ನು ನಾವು ಹೊಂದಿದ್ದೇವೆ” ಎಂದು ಶರಣ ಪ್ರಕಾಶ ಪಾಟೀಲ ವಿವರಿಸಿದರು.
“ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಹಲವು ಯೋಜನೆಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಶೀಘ್ರದಲ್ಲೇ, ವೈದ್ಯಕೀಯ ಕಾಲೇಜುಗಳಿಲ್ಲದ ಜಿಲ್ಲೆಗಳಲ್ಲಿ ಸಂಪೂರ್ಣ ಸುಸಜ್ಜಿತ ಸಂಸ್ಥೆಗಳನ್ನು ಆರಂಭಿಸಲಾಗುತ್ತದೆ. ಇದು ಆರ್ಥಿಕವಾಗಿ ದುರ್ಬಲ ವರ್ಗಗಳ ಅರ್ಹ ವಿದ್ಯಾರ್ಥಿಗಳು ಸರ್ಕಾರಿ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಅನುವು ಮಾಡಿಕೊಡುತ್ತದೆ ಎಂದು ಸಚಿವ ಶರಣ ಪ್ರಕಾಶ ಪಾಟೀಲರು ಆಶಯ ವ್ಯಕ್ತಪಡಿಸಿದರು.
ಎನ್‌ಎಂಸಿ ಅಧ್ಯಕ್ಷರಾದ ಡಾ. ಗಂಗಾಧರ ಅವರು ಭಾಷಣ ಮಾಡಿ, ಜಾಗತಿಕ ಮಟ್ಟದಲ್ಲಿ ಸುಮಾರು 3 ಕೋಟಿ ವೈದ್ಯರ ಕೊರತೆ ಇದೆ ಎಂದರು.
ಯುವ ಪೀಳಿಗೆಯು ವೈದ್ಯಕೀಯ ವೃತ್ತಿಯನ್ನು ಕೈಗೆತ್ತಿಕೊಳ್ಳಬೇಕು. ಭಾರತೀಯ ವೈದ್ಯರಿಗೆ ವಿಶ್ವಾದ್ಯಂತ ಹೆಚ್ಚಿನ ಬೇಡಿಕೆಯಿದೆ, ಗಟ್ಟಿಯಾದ ಶೈಕ್ಷಣಿಕ ಅಡಿಪಾಯ ಮತ್ತು ಇಂಗ್ಲಿಷ್ ಪ್ರಾವೀಣ್ಯತೆ ಹೊಂದಿರುವ ಭಾರತೀಯರು ವಿಶ್ವಮಟ್ಟದಲ್ಲಿ ಮನ್ನಣೆ ಗಳಿಸಿದ್ದಾರೆ. ವೈದ್ಯಕೀಯ ವೃತ್ತಿಪರರ ಸಂಖ್ಯೆ ಹೆಚ್ಚಳ ಮಾಡಲು ಎನ್‌ಎಂಸಿ ಯ ಪ್ರಮುಖ ಗುರಿಗಳಲ್ಲಿ ಒಂದಾಗಿದೆ” ಎಂದು ಹೇಳಿದರು.
ವೈದ್ಯಕೀಯ ಸೀಟುಗಳ ಹೆಚ್ಚಳಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಸಚಿವ ಶರಣ ಪ್ರಕಾಶ ಪಾಟೀಲ ಆಗ್ರಹ